ಮಡಿಕೇರಿ: ಬಿಜೆಪಿಯು ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಭಾರತೀಯ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದು ಜನರಿಗೆ ಅರ್ಥವಾಗುತ್ತಿದೆಂದು ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಸೋಮವಾರಪೇಟೆ ತಾಲೂಕಿನ ಹಾರಂಗಿಯಲ್ಲಿ ಮಾತನಾಡಿದ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆ ಗಮನಿಸಿದಾಗ ಆ ಪಕ್ಷದ ಭಾವನೆಗಳು ಏನು ಎನ್ನುವುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿಯವರು ಸಿದ್ಧವಾಗುತ್ತಿದ್ದು, ಹೆಚ್ಚು ಸ್ಥಾಗಳನ್ನು ಗೆಲ್ಲುವ ನಿಟ್ಟಿನಲ್ಲಿ ಯೋಧರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಅವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
Advertisement
Advertisement
ಇದು ನನ್ನ ಅಭಿಪ್ರಾಯವಲ್ಲ. ದೇಶದ ಜನರಲ್ಲಿರುವ ಭಾವನೆಯಾಗಿದೆ. ಬಿಜೆಪಿಗೆ ಅಧಿಕಾರ ದಾಹವಿದೆ. ಅವರ ನಡವಳಿಕೆಯ ಬಗ್ಗೆ ಜನರು ತಿಳುವಳಿಕೆ ಹೊಂದಿದ್ದಾರೆ. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಘಟನೆಗಳಲ್ಲಿ ಭಾರೀ ಅನಾಹುತಗಳು ಸಂಭವಿಸಿವೆ. ಅವುಗಳಿಗೆ ಸಂಬಂಧಿಸಿದ ವಾಸ್ತವನ್ನು ಜನರ ಮುಂದೆ ತೆರೆದಿಡದೇ ಘಟನೆಗಳನ್ನು ವಿಜ್ರಂಭಿಸಲಾಗುತ್ತಿದೆ. ಇದರಿಂದ ದೇಶಕ್ಕೆ ಹಾಗೂ ಪ್ರಜೆಗಳಿಗೆ ಯಾವುದೇ ಲಾಭವಿಲ್ಲ ಎಂದು ಆರೋಪಿಸಿದರು.
Advertisement
ದೇಶದಲ್ಲಿ ಶಾಂತಿಯನ್ನು ಕಾಪಾಡಬೇಕು. ಅಮಾಯಕರ ಜೀವ ಉಳಿಯಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅನೇಕ ನಿರ್ಧಾರಗಳನ್ನು ಕೈಗೊಳ್ಳಬೇಕೇ ಹೊರತು ಸಾರ್ವಜನಿಕರ ಜೀವನದ ಜೊತೆಗೆ ಚೆಲ್ಲಾಟವಾಡಬಾರದು ಎಂದು ಹೇಳಿದರು.
Advertisement
ಹುತಾತ್ಮ ಯೋಧ ಗುರು ಅವರ ಕುಟುಂಬಸ್ಥರಿಗೆ ಈಗಾಗಲೇ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಜೊತೆಗೆ ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ಕೊಡಲಾಗುವುದು ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv