ತುಮಕೂರು: ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಸಿಎಂ ಕುಮಾರಸ್ವಾಮಿ ಅವರು, ಇಂದು ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಹಾಡಿಹೊಗಳಿದ್ದಾರೆ.
ಸಿದ್ದಗಂಗಾ ಶ್ರೀಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಸಿದ್ದರಾಮಯ್ಯ ಅವರು ನನ್ನ ಮಾರ್ಗದರ್ಶಿ ಮತ್ತು ಹಿರಿಯರು ಎಂದರು. ಅಲ್ಲದೇ ದಿನನಿತ್ಯದ ರಾಜಕೀಯ ದ್ವೇಷ ಮರೆತು ಎಲ್ಲರೂ ಒಂದೇ ವೇದಿಕೆಯಲ್ಲಿ ಸೇರಿದ್ದೇವೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಅವರೊಂದಿಗೆ ಕೆಲ ಹೊತ್ತು ಮಾತನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕೂಡಾ ಭಾಗವಹಿಸಿದ್ದರು.
Advertisement
ನಾಯಕರು ಹೇಳೋದು ಏನು?
ಸಿಎಂ ಎಚ್‍ಡಿಕೆ ಅವರು ಸಿದ್ದರಾಮಯ್ಯ ಅವರನ್ನು ಹೊಗಳಿ ಮಾತನಾಡಿದರೆ, ಇತ್ತ ಕಾಂಗ್ರೆಸ್, ಜೆಡಿಎಸ್ ಶಾಸಕರು ಮತ್ತೆ ತಮ್ಮ ಇಷ್ಟದ ನಾಯಕರ ಹೇಳಿಕೆಯನ್ನು ಮುಂದುವರಿಸಿದರು. ಸಿದ್ದರಾಮಯ್ಯ ನಮ್ಮ ನಾಯಕರು ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ನನಗೆ ವ್ಯಕ್ತಿ ನಿಷ್ಠೆ ಅಂದರೆ ಸಿದ್ದರಾಮಯ್ಯ ಅವರು. ಪಕ್ಷ ನಿಷ್ಠೆ ಅಂದರೆ ಕಾಂಗ್ರೆಸ್ ಎಂದು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.
Advertisement
Advertisement
ಕಾಂಗ್ರೆಸ್ ನಾಯಕರ ಹೇಳಿಕೆಗೆ ಅಸಮಾಧಾನ ಹೊರ ಹಾಕಿದ ಜೆಡಿಎಸ್ ನಾಯಕರು ಸರ್ಕಾರ ಐದು ವರ್ಷ ಸುಲಲಿತವಾಗಿ ನಡೆಯಬೇಕು ಅಂದರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸ್ಪಷ್ಟವಾಗಿ ರಾಜ್ಯದ ನಾಯಕರಿಗೆ ಸೂಚನೆ ನೀಡಬೇಕು ಎಂದು ಮೇಲುಕೋಟೆಯಲ್ಲಿ ಸಚಿವ ಪುಟ್ಟರಾಜು ಎಚ್ಚರಿಕೆ ನೀಡಿದರು. ಉಳಿದಂತೆ ಯಾರೋ ಯಾರನ್ನೋ ಖುಷಿ ಪಡಿಸೋಕೆ ಯಾವುದೇ ಹೇಳಿಕೆ ಕೊಡಬಾರದು ಎಂದು ಬಂಡೆಪ್ಪ ಕಾಶೆಂಪೂರ್ ಕೊಪ್ಪಳದಲ್ಲಿ ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv