ಸಮ್ಮಿಶ್ರ ಸರ್ಕಾರದಲ್ಲಿನ ಕಚ್ಚಾಟ ಭಿನ್ನಮತ ದೆಹಲಿಯಲ್ಲಿ ಸ್ಫೋಟ!

Public TV
2 Min Read
hdk rahul gandhi

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಿಎಂ ಕುಮಾರಸ್ವಾಮಿ ಭೇಟಿ ಮಾಡಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರ ಇಂದು 100 ದಿನಗಳ ಆಡಳಿತವನ್ನು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜ್ಯ ಸಮ್ಮಿಶ್ರ ಸರ್ಕಾರದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ನೀಡುತ್ತಿರುವ ಹೇಳಿಕೆಗಳು ಮೈತ್ರಿ ಧರ್ಮಕ್ಕೆ ಧಕ್ಕೆಯಾಗುತ್ತಿದ್ದು, ಅನಗತ್ಯ ಹೇಳಿಕೆ ಮೂಲಕ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿದ್ದಾರೆ. ಅದ್ದರಿಂದ ಸರ್ಕಾರಕ್ಕೆ ಯಾವುದೇ ಸಮಸ್ಯೆಯಾದರೂ ಅದಕ್ಕೆ ಸಿದ್ದರಾಮಯ್ಯ ಹಾಗೂ ಬೆಂಬಲಿಗರು ನೇರ ಕಾರಣರಾಗುತ್ತಾರೆ ಎಂದು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವೇಳೆ ಉಜಿರೆ ಶಾಂತಿವನದ ವೀಡಿಯೋದಲ್ಲಿ ನೀಡಿರುವ ಹೇಳಿಕೆಯಿಂದ ಮೈತ್ರಿ ಸರ್ಕಾರದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ತಿಳಿಸಿದ್ದು, ಸದ್ಯ ಸಿದ್ದರಾಮಯ್ಯ ಅವರ ವಿದೇಶಿ ಪ್ರವಾಸದಿಂದ ತೊಂದರೆಯಾಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಅಲ್ಲದೇ ಸರ್ಕಾರದ ವಿರುದ್ಧ ಸ್ವಪಕ್ಷಿಯರೇ ಹೇಳಿಕೆ ನೀಡಿದರೂ, ಡಿಸಿಎಂ ಪರಮೇಶ್ವರ್ ಮಾತ್ರ ಮೌನವಹಿಸಿದ್ದಾರೆ. ಇಂತಹ ಹೇಳಿಕೆಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂಬುವುದಾಗಿ ವರ್ತಿಸುತ್ತಿದ್ದು, ಮಾಜಿ ಸಿಎಂ ಒಂದು ರೀತಿ ಇದ್ದರೆ, ಡಿಸಿಎಂ ಒಂದು ರೀತಿ ಇರುತ್ತಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕಾ ಅಥವಾ ಇಂತಹ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಕಾಲ ಹರಣ ಮಾಡಬೇಕೇ ಎಂದು ಪ್ರಶ್ನಿಸಿ ದೂರು ನೀಡಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.

ಕಳೆದ ಕೆಲ ದಿನಗಳ ಹಿಂದೆಯೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಭಾಷಣವೊಂದರಲ್ಲಿ ಮತ್ತೆ ಸಿಎಂ ಆಗುವ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕೆಲ ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದರು. ಬಳಿಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ ಅವರು ಸಭೆಯಲ್ಲಿ ಕಾರ್ಯಕರ್ತರು ನಾನೇ ಸಿಎಂ ಎಂದು ಘೋಷಣೆ ಕೂಗುತ್ತಿದ್ದರು, ಹಾಗಾಗಿ ನಿಮ್ಮ ಆಶೀರ್ವಾದ ಇದ್ದರೆ ಆಗುತ್ತೇನೆ ಎಂದು ಹೇಳಿದ್ದೆ. ಇದರಿಂದ ಜೆಡಿಎಸ್ ಹಾಗೂ ಸಿಎಂ ಕುಮಾರಸ್ವಾಮಿಗೆ ಯಾವುದೇ ಇರುಸುಮುರುಸಾಗಲ್ಲ. ಕಾಂಗ್ರೆಸ್ ಶಾಸಕರು ಯಾರು ಬಿಜೆಪಿ ಸಂಪರ್ಕದಲ್ಲಿಲ್ಲ. ಇದು ಉಹಾಪೋಹ, ಬಿಜೆಪಿ ಎಲ್ಲ ನಾಯಕರು ನನ್ನೊಂದಿಗೂ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *