ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದಿಂದ ಹಿಡಿದು ಅಂತ್ಯಕ್ರಿಯೆಯವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಂಠೀರವ ಸ್ಟೇಡಿಯಂ ಬಳಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬೆಂಗಳೂರು ಹಾಗೂ ಮಂಡ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯ ಎಲ್ಲರು ಎರಡು ದಿನಗಳ ಕಾಲ ಕಾರ್ಯನಿರ್ವಹಿಸಿದ್ದಾರೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಭದ್ರತೆ ಒದಗಿಸಿದ್ದಾರೆ. ಬಹಳ ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದು ಹೇಳಿದರು.
Advertisement
ಜನರಿಂದಲೂ ಪೊಲೀಸರು ಶ್ಲಾಘನೆ ಪಡೆದುಕೊಂಡಿದ್ದಾರೆ. ಪೊಲೀಸರು ಮುಂದಿನ ದಿನಗಳಲ್ಲಿ ಹೀಗೆಯೇ ಬಂದೋಬಸ್ತ್ ಒದಗಿಸುವ ಮೂಲಕ ಜನರ ಮೆಚ್ಚುಗೆ ಪಡೆಯಲಿ. ಪೊಲೀಸ್ ವಿಭಾಗಕ್ಕೆ ನನ್ನ ಅಭಿನಂದನೆಗಳು ಎಂದು ತಿಳಿಸಿದರು.
Advertisement
ಖ್ಯಾತ ನಟ, ಅಪರೂಪದ ರಾಜಕಾರಣಿ ಅಂಬರೀಷ್ ಅವರಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಭಾವನಾತ್ಮಕ ವಿದಾಯ ಹೇಳಿದ ನಂತರ ಸುಮಲತಾ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.#Ambareesh pic.twitter.com/4GwxGfOk44
— CM of Karnataka (@CMofKarnataka) November 26, 2018
Advertisement
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಟ, ಮಾಜಿ ಸಚಿವ ಅಂಬರೀಷ್ ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಧ್ವಜವನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಿದರು. pic.twitter.com/51zQEWjpWR
— CM of Karnataka (@CMofKarnataka) November 26, 2018
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv