– ಕುಮಾರಸ್ವಾಮಿಯನ್ನು ಕಡೆಗಣಿಸಿದ್ರಾ ರಾಹುಲ್ ಗಾಂಧಿ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ದೂರು ನೀಡಲು ದೆಹಲಿಗೆ ಹೋಗಿದ್ದ ಸಿಎಂ ಕುಮಾರಸ್ವಾಮಿ ಭೇಟಿಯಾಗಾದೇ ವಾಪಾಸ್ ಆಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಕೇಂದ್ರ ಸಚಿವರ ಭೇಟಿಯ ನೆಪದಲ್ಲಿ ನಿನ್ನೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಜೊತೆಗೆ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದರು. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಿದ್ದರಾಮಯ್ಯ ಹಾಗೂ ಬಂಡಾಯ ನಾಯಕರ ವಿರುದ್ಧ ದೂರು ನೀಡಲು ಮುಂದಾಗಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಮಾಜಿ ಸಿಎಂ ಸಿದ್ದರಾಮಯ್ಯ ತಂತ್ರ, ಬಂಡಾಯದ ಶಾಸಕರಿಗೆ ಬೆಂಬಲ ನೀಡುವ ಕೈಗಳು ಯಾರು ಅಂತಾ ಹೇಳಲು ಸಿಎಂ ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದ್ದವು. ಆದರೆ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಯಾವುದೇ ಚರ್ಚೆ ನಡೆಸದೆ ಸಿಎಂ ವಾಪಾಸ್ ಆಗುತ್ತಿದ್ದಾರಂತೆ.
Advertisement
Advertisement
ಸಿಎಂ ಕುಮಾರಸ್ವಾಮಿ ನಿನ್ನೆಯಿಂದ ಇಂದು ಸಂಜೆಯವರೆಗೂ ದೆಹಲಿಯಲ್ಲಿದ್ದಾರೆ ಎನ್ನುವ ಮಾಹಿತಿ ರಾಹುಲ್ ಗಾಂಧಿ ಅವರಿಗಿತ್ತು. ಆದರೆ ಭೇಟಿಗೆ ಸಮಯ ನೀಡದೆ ಸುಮ್ಮನಾಗಿದ್ದಾರೆ. ಈ ಮೂಲಕ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಡ್ ರಾಜ್ಯಗಳ ಸಂಪುಟ ರಚನೆ ಹಾಗೂ ಸಂಸತ್ ಅಧಿವೇಶನದಲ್ಲಿ ಬ್ಯುಸಿಯಾಗಿ ಕುಮಾರಸ್ವಾಮಿ ಅವರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯದ ಸಮಸ್ಯೆಯನ್ನು ಮುಖ್ಯಮಂತ್ರಿಗಳೆ ಬಗೆಹರಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ರಾಹುಲ್ ಗಾಂಧಿ ಭೇಟಿಯಾಗದೆ ದೂರ ಉಳಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಈ ಸಂಬಂಧ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ನಾನು ರಾಹುಲ್ ಗಾಂಧಿ ಭೇಟಿಗೆ ಅವಕಾಶ ಕೇಳಿಲ್ಲ. ಕೇಂದ್ರ ಸಚಿವರ ಭೇಟಿಗೆ ದೆಹಲಿಗೆ ಬಂದಿದ್ದೇನೆ. ಬಂದ ಕೆಲಸ ಪೂರ್ಣಗೊಂಡಿದೆ ರಾಜ್ಯಕ್ಕೆ ಮರಳುತ್ತಿರುವೆ ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv