ಬೆಂಗಳೂರು: ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು 58ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಶನಿವಾರ ರಾತ್ರಿ ಸಿಎಂ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಟ್ವೀಟ್ ನಲ್ಲೇನಿದೆ?:
“ರಾಜ್ಯದಲ್ಲಿ ನಡೆದ ಕೆಲವು ದುರ್ಘಟನೆಗಳಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಆದ್ದರಿಂದ ನನ್ನ ಹುಟ್ಟಿದ ದಿನವನ್ನು ಸಾರ್ವಜನಿಕವಾಗಿ ಸಂಭ್ರಮಿಸುವ ಮನಸ್ಥಿತಿಯಲ್ಲಿ ನಾನಿಲ್ಲ. ಹಿತೈಷಿಗಳ ಹಾರೈಕೆಯೇ ನನಗೆ ಶ್ರೀರಕ್ಷೆ. ನಾಳೆ(ಭಾನುವಾರ) ನನ್ನ ಕುಟುಂಬದೊಡನೆ ಇರುತ್ತೇನೆ” ಎಂದು ನೋವಿನಿಂದ ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
Advertisement
ಮುಖ್ಯಮಂತ್ರಿ ಆದ ಬಳಿಕ ಕುಮಾರಸ್ವಾಮಿ ಅವರಿಗೆ ಇದು ಮೊದಲ ಹುಟ್ಟುಹಬ್ಬವಾಗಿದೆ. ಆದ್ದರಿಂದ ಅನೇಕರು ಅವರಿಗೆ ಶುಭಾಶಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸುತ್ತಿದ್ದರು. ಆದರೆ ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಯಿಂದ ಬೇಸರಗೊಂಡು ಈ ರೀತಿಯಾಗಿ ಅವರ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
Advertisement
ಸಿಎಂ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಕಾರಣ ಸಾರ್ವಜನಿಕರು, ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ಸಿಎಂ ಸಿಗುವುದಿಲ್ಲ. ಇಡೀ ದಿನ ಸಿಎಂ ಕುಮಾರಸ್ವಾಮಿ ತಮ್ಮ ಕುಟುಂಬ ಜೊತೆ ಇರಲು ನಿರ್ಧಾರ ಮಾಡಿದ್ದು, ಜೆಪಿ ನಗರದ ನಿವಾಸಕ್ಕೆ ಯಾರು ಬಾರದಂತೆ ಮನವಿ ಮಾಡಿದ್ದರು. ಜೊತೆಗೆ ಕಾರ್ಯಕರ್ತರು, ಅಭಿಮಾನಿಗಳು ಫ್ಲೆಕ್ಸ್ ಬ್ಯಾನರ್ ಅಳವಡಿಸಿ ಊರಿನ ಅಂದ ಹಾಳು ಮಾಡಬೇಡಿ. ಪರಿಸರ ಕಾಳಜಿ ಮೆರೆದಲ್ಲಿ ಅದೇ ಅತ್ಯುತ್ತಮ ಸಿಎಂ ಮನವಿ ಮಾಡಿದ್ದರು.
Advertisement
ಶನಿವಾರ ಮಧ್ಯರಾತ್ರಿ ಸಿಎಂ ಅವರು ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ನಡೆದ ಕೆಲವು ದುರ್ಘಟನೆಗಳಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ. ಆದ್ದರಿಂದ ನನ್ನ ಹುಟ್ಟಿದ ದಿನವನ್ನು ಸಾರ್ವಜನಿಕವಾಗಿ ಸಂಭ್ರಮಿಸುವ ಮನಸ್ಥಿತಿಯಲ್ಲಿ ನಾನಿಲ್ಲ. ಹಿತೈಷಿಗಳ ಹಾರೈಕೆಯೇ ನನಗೆ ಶ್ರೀರಕ್ಷೆ. ನಾಳೆ ನನ್ನ ಕುಟುಂಬದೊಡನೆ ಇರುತ್ತೇನೆ.
— CM of Karnataka (@CMofKarnataka) December 15, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv