ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಸ್ಥಿಮಿತವನ್ನು ಕಳೆದುಕೊಂಡಿದ್ದು, ಹೀಗಾಗಿ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲವೆಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ನೂತನ ಸಂಪುಟ ವಿಸ್ತರಣೆಯಿಂದಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಅಲ್ಲದೇ ರಾಜ್ಯದಲ್ಲಿಯೂ ಅಸ್ಥಿರತೆ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಗಳು ಸಹ ತಮ್ಮ ಸ್ಥಿಮಿತಿಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಮಂಡ್ಯದ ಜೆಡಿಎಸ್ ಮುಖಂಡನ ಕೊಲೆ ವಿಷಯಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೂಟ್ ಮಾಡಿ ಎಂದು ಹೇಳಿದ್ದಾರೆ. ಅವರಿಂದ ಸರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಹೇಳಿದ್ದಾರೆ.
Advertisement
Advertisement
ಸಿಎಂ ಕುಮಾರಸ್ವಾಮಿಯವರಿಗೆ ಆಡಳಿತ ಮಾಡಲು ಆಗುತ್ತಿಲ್ಲ. ಅಲ್ಲದೇ ಮೈತ್ರಿ ಸರ್ಕಾರದಲ್ಲಿಯೂ ಒಗ್ಗಟ್ಟಿಲ್ಲ. ಇದನ್ನು ದೇವೇಗೌಡರೂ ಸಹ ಒಪ್ಪಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಒಗ್ಗಟ್ಟು ನೋಡಿಕೊಳ್ಳುವುದು ಕುಮಾರಸ್ವಾಮಿ ಜವಾಬ್ದಾರಿ, ಅವರು ಅದನ್ನ ಮಾಡುತ್ತಿಲ್ಲ. ಮೈತ್ರಿ ಸರ್ಕಾರ ಅದಾಗಿಯೇ ಬೀಳುತ್ತದೆ ಹೊರತು, ನಾವು ಬೀಳಿಸುವುದಿಲ್ಲ. ಈ ಸರ್ಕಾರ ಬೀಳುವುದರಿಂದ ರಾಜ್ಯದ ಜನತೆಗೆ ಒಳ್ಳೆಯದಾಗಲಿದೆ ಎಂದಿದ್ದಾರೆ.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv