ಮೈಸೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.
ಜಿಲ್ಲೆಯ ಎಚ್.ಡಿ.ಕೋಟೆ ಸಮೀಪದ ಕಬಿನಿ ಹಿನ್ನೀರು ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಟಿಪ್ಪು ಜಯಂತಿ ಗಲಾಟೆಯ ನಡುವೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದರು. ಆದ್ದರಿಂದ ಶನಿವಾರ ರಾತ್ರಿ ಮೈಸೂರಿನ ಎಚ್.ಡಿ.ಕೋಟೆಗೆ ಆಗಮಿಸಿದ್ದಾರೆ.
Advertisement
Advertisement
ಈ ವೇಳೆ ಸಾರ್ವಜನಿಕರು ಮತ್ತು ಸ್ಥಳೀಯ ಮುಖಂಡರಿಂದಲೂ ಸಿಎಂ ಕುಮಾರಸ್ವಾಮಿ ಅಂತರವನ್ನು ಕಾಯ್ದುಕೊಂಡಿದ್ದಾರೆ. ಜೊತೆಗೆ ಯಾರಿಗೂ ಒಳ ಪ್ರವೇಶಿಸದಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು ತಂದೆ ಕುಮಾರಸ್ವಾಮಿ ಅವರನ್ನು ನೋಡಲು ಮಗ ನಿಖಿಲ್ ಕುಮಾರಸ್ವಾಮಿ ಆಗಮಿಸಿದ್ದಾರೆ.
Advertisement
Advertisement
ತಂದೆಯ ಆರೋಗ್ಯವನ್ನು ವಿಚಾರಿಸಲು ಭದ್ರತೆ ಸಮೇತವಾಗಿ ಕಬಿನಿ ಹಿನ್ನೀರಿಗೆ ನಿಖಿಲ್ ಆಗಮಿಸಿದ್ದು, ಬೋಟ್ ಏರಿ ರೆಸಾರ್ಟ್ ಗೆ ನಿಖಿಲ್ ತೆರಳಿದ್ದಾರೆ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಮೈಸೂರಿನಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಬೆಂಗಳೂರು ಅಥವಾ ಮನೆಯಲ್ಲಿದ್ದರೆ ಸಾರ್ವಜನಿಕರು ಬರುವ ಸಾಧ್ಯತೆ ಇದ್ದ ಕಾರಣ ಸಿಎಂ ಕುಮಾರಸ್ವಾಮಿ ಅವರು ಹಿನ್ನೀರು ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews