ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಬಿಟ್ಟು, ಈಗ ಆಪರೇಷನ್ ಲೋಟಸ್ ರಾಕೆಟ್ ಮಾಡುತ್ತಿದೆ. ಆದರೆ ಆಪರೇಷನ್ ಲೋಟಸ್ ರಾಕೆಟ್‍ಗೆ ತಿರುಗೇಟು ನೀಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೂಡ ಪ್ಲಾನ್ ಮಾಡಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರಿಗೆ ಟಾಂಗ್ ಕೊಡಲು ಪ್ಲಾನ್ ಮಾಡಿದ್ದಾರೆ. ಒಂದು ವೇಳೆ ಆಪರೇಷನ್ ಲೋಟಸ್ ರಾಕೆಟ್ ಯಶಸ್ವಿಯಾಗಿ ಕಾಂಗ್ರೆಸ್-ಜೆಡಿಎಸ್ 18 ಮಂದಿ ಶಾಸಕರು ರಾಜೀನಾಮೆ ಕೊಟ್ಟರೆ, ಆಗ ರಾಜ್ಯಪಾಲರು ಸಿಎಂ ಕುಮಾರಸ್ವಾಮಿ ಅವರಿಗೆ ವಿಶ್ವಾಸಮತ ಯಾಚನೆಗೆ ಸೂಚನೆ ಕೊಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
Advertisement
Advertisement
ಈ ವೇಳೆ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆಗೆ ರಾಜ್ಯಪಾಲರಿಂದ ವಾರಗಳ ಕಾಲ ಸಮಯ ಕೇಳುವ ಸಾಧ್ಯತೆ ಇದೆ. ಇನ್ನು ಸಮಯ ಸಿಕ್ಕಿದರೆ ಬಿಜೆಪಿಯ ನಾಲ್ವರು ಶಾಸಕರಿಗೆ ರಿವರ್ಸ್ ಆಪರೇಷನ್ ಮಾಡುವ ಸಾಧ್ಯತೆಯೂ ಇದೆ. ಇದರ ಜೊತೆಗೆ ರಾಜೀನಾಮೆ ಕೊಟ್ಟ ಸಚಿವರಿಗೆ ಸ್ಪೀಕರ್ ಮುಂದಿಟ್ಟುಕೊಂಡು ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಳಿಸುವ ಅಸ್ತ್ರವನ್ನು ಪ್ರಯೋಗಿಸಬಹುದು ಎಂದು ಹೇಳಲಾಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv