ವಿಜಯಪುರ: ಮಂಡ್ಯ ಜೆಡಿಎಸ್ ಮುಖಂಡನ ಕೊಲೆ ಪ್ರಕರಣ ತಿಳಿಯುತ್ತಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಹಂತಕರನ್ನು ಶೂಟೌಟ್ ಮಾಡಿ ಎಂದು ಆದೇಶಿಸಿದ್ದಾರೆ.
ಸೋಮವಾರ ಸಂಜೆ 4.30ರ ವೇಳೆಗೆ ಜೆಡಿಎಸ್ ಮುಖಂಡ ಪ್ರಕಾಶ್ ರನ್ನು ದುಷ್ಕರ್ಮಿಗಳು ಮದ್ದೂರಿನ ಟಿಬಿ ಸರ್ಕಲ್ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಕುರಿತು ದೂರವಾಣಿ ಮೂಲಕ ಜಿಲ್ಲಾ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿದ ಅವರು, ನಿಜಕ್ಕೂ ನನಗೆ ಯಾವ ವಿಚಾರಕ್ಕೆ ಕೊಲೆ ನಡೆದಿದೆ ಎಂಬುದು ತಿಳಿಯುತ್ತಿಲ್ಲ. ಕೊಲೆಯಾದ ವ್ಯಕ್ತಿ ತುಂಬಾ ಒಳ್ಳೆಯ ಮನುಷ್ಯನಾಗಿದ್ದ. ಈ ಹಿಂದೆಯೂ ಎರಡು ಕೊಲೆಗಳು ನಡೆದಿವೆ ಎನ್ನುವ ಮಾತು ಕೇಳಿದ್ದೇನೆ. ಕೂಡಲೇ ಹಂತಕರನ್ನು ಶೂಟೌಟ್ ಮಾಡಿ, ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.
Advertisement
Advertisement
ಇಂದು ಸಂಜೆ 4.30ರ ಸುಮಾರಿಗೆ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಕಾರಿನಲ್ಲೇ ಪ್ರಕಾಶ್ ರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೂವರೆಗೂ ಯಾವುದೇ ಆರೋಪಿಗಳ ಸುಳಿವು ಸಿಕ್ಕಿಲ್ಲ. ಹಳೇ ವೈಷಮ್ಯವೇ ಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಪ್ರಕಾಶ್ ಮೂಲತಃ ಕೊಪ್ಪನಹಳ್ಳಿ ಗ್ರಾಮದವರಾಗಿದ್ದರು. 2016ರ ಡಿಸೆಂಬರ್ 25ರಂದು ಜೆಡಿಎಸ್ ಕಾರ್ಯಕರ್ತರ ಜೋಡಿ ಕೊಲೆಯಾಗಿತ್ತು. ಅಂದಿನಿಂದಲೂ ಗ್ರಾಮದಲ್ಲಿ ರಾಜಕೀಯ ದ್ವೇಷ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೇ ರಾಜಕೀಯ ವೈಷಮ್ಯದಿಂದಲೇ ಪ್ರಕಾಶ್ ರವರ ಹತ್ಯೆ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ : ಮದ್ದೂರು ನಗರದಲ್ಲಿ ಕತ್ತು ಕೊಯ್ದು ಜೆಡಿಎಸ್ ಮುಖಂಡನ ಬರ್ಬರ ಹತ್ಯೆ
Advertisement
Advertisement
ಸಿಎಂ ಸ್ಪಷ್ಟನೆ: ಮದ್ದೂರಿನಲ್ಲಿ ಇಂದು ಹಾಡುಹಗಲೇ ನಡೆದಿರುವ ಕೊಲೆ ಪ್ರಕರಣ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಕೊಲೆಯಾದ ಪ್ರಕಾಶ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಕಾನೂನು ಪ್ರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ. ಈ ಪ್ರಕರಣ ಕುರಿತು ಮಾಹಿತಿ ಪಡೆಯುವ ಸಂದರ್ಭದಲ್ಲಿ ಬಳಸಿದ ಪದ ಭಾವನಾತ್ಮಕ ಪ್ರತಿಕ್ರಿಯೆಯೇ ಹೊರತು, ಆದೇಶವಲ್ಲ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv