ಬೆಂಗಳೂರು: ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
Advertisement
Advertisement
ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ. ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ, ಲೋಕಸಭೆ ಕ್ಷೇತ್ರಗಳಲ್ಲಿನ ಸ್ಥಿತಿಗತಿ ಮತ್ತು ಶಾಸಕರ ಕ್ಷೇತ್ರವಾರು ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
Advertisement
ರಮೇಶ್ ಜಾರಕಿಹೊಳಿ ಅವರ ಜೊತೆ ಮೈತ್ರಿ ಪಕ್ಷದ ಶಾಸಕರು ಸ್ನೇಹಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಿಎಂ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶಾಸಕರು ಯಾರೂ ಯಾವುದೇ ಆಮಿಷಕ್ಕೆ ಬಲಿಯಾಗಬಾರದು. ಆಪರೇಷನ್ ಕಮಲ ಸಾಧ್ಯತೆ ಇದೆ. ಒಂದು ವೇಳೆ ಬಿಜೆಪಿಯಿಂದ ಆಫರ್ ಬಂದರೆ ತಕ್ಷಣವೇ ತಿಳಿಸಿ ಎಂದು ಸಿಎಂ ಈಗಾಗಲೇ ಶಾಸಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.