ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸನ್ಯಾಸಿನಾ? ಮುಂದಿನ ವಿಧಾನಸಭಾ ಚುನಾವಣೆಯ ಬಳಿಕ ನಾನು ಸಿಎಂ ಆಗುತ್ತೇನೆ ಅಂತ ಹೇಳಿರುವುದು ಸಹಜ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಯ ತೇರದಾಳದಲ್ಲಿ ಮಾತನಾಡಿದ ಸಿಎಂ, ಜನರ ಸೇವೆ ಮಾಡಲು ರಾಜಕಾರಣದಲ್ಲಿ ಸ್ಥಾನಮಾನ ಬೇಕಾಗುತ್ತದೆ. ನಾನು ಮುಂದಿನ ಬಾರಿ ಮುಖ್ಯಮಂತ್ರಿಯಾಗುತ್ತೇನೆ ಅಂತ ಅವರು ಹೇಳಿದ್ದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಅವರದ್ದು ಸುಬ್ಬರಾಯನಕಟ್ಟೆ ಭಾಷಣ. ಬಾಗಲಕೋಟೆಗೆ ಬಂದು ಬಾಲಕೋಟ್ ಬಗ್ಗೆ ಚರ್ಚೆ ಮಾಡಿ ಹೋಗಿದ್ದಾರೆ. ರಾಜ್ಯಕ್ಕೆ ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ಏನು ಕೊಟ್ಟಿದ್ದಾರೆ ಅಂತ ಹೇಳುತ್ತಿಲ್ಲ ಎಂದು ವ್ಯಂಗ್ಯವಾಡಿದರು.
Advertisement
ಸ್ವಾರ್ಥಕ್ಕಾಗಿ ಕುಮಾರುಸ್ವಾಮಿ ಕಣ್ಣೀರು ಹಾಕುತ್ತಾರೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, “ಹೌದು ನಾನೇನೋ ಕಣ್ಣೀರು ಹಾಕುವ ಮುಖ್ಯಮಂತ್ರಿ. ಭಾವನಾತ್ಮಕ ವಿಚಾರಗಳನ್ನು ಪ್ರಚಾರ ಮಾಡಿ ಮತ ಕೇಳುತ್ತೇನೆ. ನಾನು ಕಣ್ಣಲ್ಲಿ ನೀರಾದ್ರೂ ಹಾಕಿದೆ, ಆದರೆ ಅವರು ಅದನ್ನೂ ಹಾಕಲಿಲ್ಲ. ಹಾಗಾದ್ರೆ ಅವ್ರೇನು? ಐದು ವರ್ಷಗಳ ಕಾಲ ದೇಶವನ್ನು ಆಳಿದ ಪ್ರಧಾನಿ ಮೋದಿ ರಾಜ್ಯಕ್ಕೆ, ಉತ್ತರ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
Advertisement
ನಿಖಿಲ್ ಎಲ್ಲಿದ್ದೀಯಪ್ಪ ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಅವರು, ಚುನಾವಣೆ ಪೂರ್ಣಗೊಂಡು ಬಳಿಕ ಯಾರು, ಯಾರನ್ನ ಎಲ್ಲಿದ್ದೀಯಪ್ಪ ಅಂತ ಕೇಳುತ್ತಾರೆಂದು ನೋಡೋಣ ಎಂದು ವ್ಯಂಗ್ಯವಾಡಿದರು.