Wednesday, 20th February 2019

Recent News

ಸಚಿವ ಮಹೇಶ್ ರಾಜೀನಾಮೆ – ಎಲ್ಲವನ್ನೂ ಬಹಿರಂಗವಾಗಿ ಹೇಳೋಕಾಗಲ್ಲ: ಸಿಎಂ ಎಚ್‍ಡಿಕೆ

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ಕುರಿತು ಯಾವುದೇ ಹೇಳಿಕೆಗಳನ್ನು ಬಹಿರಂಗವಾಗಿ ಹೇಳುವುದಕ್ಕೆ ಸಾಧ್ಯವಿಲ್ಲವೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಚಿವರ ರಾಜೀನಾಮೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಬಿಎಸ್‍ಪಿ ಪಕ್ಷದ ಏಕೈಕ ಶಾಸಕ ಹಾಗೂ ಸಮ್ಮಿಶ್ರ ಸರ್ಕಾರದ ಸಚಿವರಾಗಿದ್ದ ಎನ್.ಮಹೇಶ್‍ರವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕೇವಲ ಪಕ್ಷದ ಸಂಘಟನೆ ದೃಷ್ಟಿಯಿಂದ ಮಾತ್ರ. ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಸೂಚನೆಯಂತೆ ಅವರು ರಾಜೀನಾಮೆ ಕೊಟ್ಟಿರಬಹುದು ಎಂದು ಹೇಳಿದರು. ಇದನ್ನೂ ಓದಿ: ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನ-ಸಚಿವ ಸ್ಥಾನಕ್ಕೆ ಎನ್. ಮಹೇಶ್ ರಾಜೀನಾಮೆ

ಬಿಎಸ್‍ಪಿಯಲ್ಲಿ ನಡೆದ ಆಂತರಿಕ ಘಟನೆ ಬಗ್ಗೆ ಹೇಳೋಕೆ ಆಗಲ್ಲ. ಹೀಗಾಗಿ ನಾನು ಎಲ್ಲಾ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಪಕ್ಷ ಸಂಘಟನೆಗೆ ಸಾಧ್ಯವಾಗ್ತಿಲ್ಲ ಎಂದು ರಾಜೀನಾಮೆ ನೀಡಿರಬಹುದು. ನನ್ನ ಜತೆಯಲ್ಲಿ ಬಿಎಸ್‍ಪಿ ನಾಯಕರು ನಿರಂತರ ಸಂಪರ್ಕದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾವುದೇ ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಚಿವ ಎನ್.ಮಹೇಶ್ ರಾಜೀನಾಮೆ ನೀಡಲು ಕಾರಣ ಏನು?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply

Your email address will not be published. Required fields are marked *