ಬೆಂಗಳೂರು: ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ನನ್ನನ್ನು ಭೇಟಿ ಮಾಡಿ, ಆತುರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ಸಿಎಂ ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ತಾರತಮ್ಯ ವಿಚಾರವಾಗಿ ಡಿವೈಎಸ್‍ಪಿಯವರು ಡಿಜಿಐಜಿಪಿಯವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಪ್ರತಿಕ್ರಿಯಿಸಿದ ಅವರು, ಡಿಜಿ ಅವರಿಗೆ ಪತ್ರ ಬರೆದಿರೋ ವಿಚಾರ ನನ್ನ ಗಮನಕ್ಕೂ ಬಂದಿದೆ. ಖುದ್ದು ಡಿಜಿ ನೀಲಮಣಿ ಎನ್ ರಾಜುರವನ್ನು ಕರೆಸಿ ಈ ಕುರಿತು ಚರ್ಚೆ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಒಂದು ದಿನ ರಜೆಗೆ ಡಿವೈಎಸ್‍ಪಿ ಪರದಾಟ – ರೊಚ್ಚಿಗೆದ್ದ ಡಿವೈಎಸ್‍ಪಿಯಿಂದ ಡಿಜಿಐಜಿಪಿಗೆ ಪತ್ರ
Advertisement
ಈ ವೇಳೆ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ವಿಚಾರ ಪತ್ರದಲ್ಲಿ ಉಲ್ಲೇಖ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಅಧಿಕಾರಿಗಳು ಸಮಸ್ಯೆ ಇದ್ದರೆ, ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡಿದ್ದೇನೆ. ವಿಧಾನಸೌಧದ ಲಿಫ್ಟ್ ಮ್ಯಾನ್ ಕೂಡಾ ನನ್ನ ಬಳಿ ಸಮಸ್ಯೆ ಹೇಳಿಕೊಳ್ಳಬಹುದು. ಯಾರು ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
Advertisement
ಅಲ್ಲದೇ ಸಿಎಜಿ ವರದಿ ವಿಚಾರ ಇದು ನನ್ನ ಕಾಲದಲ್ಲಿ ನಡೆದಿಲ್ಲ. ಹಿಂದಿನ ಸರ್ಕಾರದಲ್ಲಿ ನಡೆದಿರುವುದರಿಂದ ಈ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.