ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲದ ತಂತ್ರಗಳನ್ನು ಅರಿಯಲು ಸಿಎಂ ಕುಮಾರಸ್ವಾಮಿ ಖುದ್ದು ತಮ್ಮ ಶಾಸಕರನ್ನು ಬೇಹುಗಾರಿಕೆಯಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಬಳಿ ಕಳುಹಿಸಿಕೊಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಹೌದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಎಲ್ಲಾ ನಡೆಯ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಸಾಕ್ಷ್ಯ ಸಂಗ್ರಹಕ್ಕಾಗಿ ತಮ್ಮ ಆಪ್ತ ಶಾಸಕರನ್ನು ಯಡಿಯೂರಪ್ಪನವರ ಬಳಿ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಆಪರೇಷನ್ ಕಮಲದ ತಂತ್ರವನ್ನು ಪಡೆದು ಬಿಜೆಪಿಗೆ ಕೌಂಟರ್ ಕೊಡಲು ಮುಂದಾಗಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Advertisement
Advertisement
ಕಳೆದ ಕೆಲವು ದಿನಗಳಿಂದ ಬಿಜೆಪಿ ನಾಯಕರು ಆಪರೇಷನ್ ಕಮಲಕ್ಕೆ ಏನೆಲ್ಲ ಪ್ರಯತ್ನಪಟ್ಟರು ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ನಾಯಕರ ಎಲ್ಲ ಮಾಹಿತಿಗಳು ಗುಪ್ತವಾಗಿ ಸಿಎಂ ಕುಮಾರಸ್ವಾಮಿಗೆ ಸಿಗುತ್ತಿದೆ. ಅಲ್ಲದೇ ನಾಗಮಂಗಲದ ಶಾಸಕ ಸುರೇಶ್ ಗೌಡರನ್ನು ಬಿಜೆಪಿ ನಾಯಕರ ಬಳಿ ಕಳುಹಿಸಿ, ಬಿಜೆಪಿ ನಾಯಕರ ಆಮೀಷದ ದಾಖಲೆಯನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
Advertisement
ಸಿಎಂ ಕುಮಾರಸ್ವಾಮಿಯವರು ಆಪರೇಷನ್ ಕಮಲದ ಬೇಡಿಕೆಗಳನ್ನು ಆಧಾರವಾಗಿಟ್ಟುಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ವಿರುದ್ಧ ನಿರ್ಣಾಯಕ ಯುದ್ಧಕ್ಕೆ ಸಜ್ಜಾಗಿದ್ದಾರೆ. ಅಲ್ಲದೇ ಬಿಜೆಪಿಯ ಶಾಸಕರ ಮೇಲೆಯೂ ಅವರು ಕಣ್ಣಿಟ್ಟಿದ್ದು, ಅಗತ್ಯ ಬಿದ್ದರೆ ಬಿಜೆಪಿ ಶಾಸಕರ ಮೇಲೆಯೇ ಆಪರೇಷನ್ ಅಸ್ತ್ರ ಬಳಸಿ ಕನಿಷ್ಠ ಐದರಿಂದ ಆರು ಜನ ಶಾಸಕರನ್ನು ತಮ್ಮತ್ತ ಸೆಳೆಯಲು ಪ್ರಯತ್ನ ನಡೆಸುತ್ತಾರೆ ಎಂದು ಹೇಳಲಾಗುತ್ತಿದೆ.
Advertisement
ಬಿಜೆಪಿಯ ಆಪರೇಷನ್ ಕಮಲಕ್ಕೆ ಟಕ್ಕರ್ ನೀಡಲು ಮುಂದಾಗಿರುವ ಸಿಎಂ ಕುಮಾರಸ್ವಾಮಿ, ಜಾಣ್ಮೆಯ ತಂತ್ರ ಪ್ರದರ್ಶಿಸಿ ಬಿಜೆಪಿ ನಾಯಕರ ವಿರುದ್ಧ ಸಾಕ್ಷ್ಯ ಸಂಗ್ರಹಿಸಿ ಅದನ್ನೇ ರಾಜ್ಯದ ಜನತೆಯ ಮುಂದೆ ದಾಳವನ್ನಾಗಿ ಬಳಸುವ ಎಲ್ಲಾ ಯೋಜನೆಗಳನ್ನು ಸಿದ್ಧ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv