ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದ ಬಳಿಕ ನಿರಂತರವಾಗಿ ಚಟುವಟಿಕೆಯಿಂದ ಇರುವ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಸದ್ಯ ಜ್ವರದಿಂದ ಬಳಲುತ್ತಿದ್ದು, ಸದ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿಗಳ ಪೂರ್ವ ನಿಯೋಜಿತ ವೇಳಾಪಟ್ಟಿಯಂತೆ ಸೋಮವಾರ ಕಲಬುರಗಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ ಈಗ ಕಲಬುರಗಿಯಲ್ಲಿ ನಡೆಯಬೇಕಿದ್ದ ಜನತಾದರ್ಶನ ಕಾರ್ಯಕ್ರಮ ಇರುವುದಿಲ್ಲ ಎಂದು ಸಿಎಂ ಕಚೇರಿ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
Advertisement
ಇದೇ ವೇಳೆ ಆಪರೇಷನ್ ಕಮಲದ ಭೀತಿಯಲ್ಲಿರುವ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಡಿಕೆ ಶಿವಕುಮಾರ್ ಇಂದು ಕಲಬುರಗಿಯ ಗಾಣಗಾಪುರದಲ್ಲಿರುವ ದತ್ತಾತ್ರೆಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ದೇವಾಲಯಕ್ಕೆ ನಾಳೆ ಸಿಎಂ ಹೆಚ್‍ಡಿಕೆ ಕೂಡ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದೆ.
Advertisement
Advertisement
ಇತ್ತ ವಿದೇಶಿ ಪ್ರವಾಸದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬರುತ್ತಿದಂತೆ ರಾಜ್ಯ ರಾಜಕೀಯ ಮತ್ತೆ ಬಿರುಸುಗೊಂಡಿದೆ. ಇಂದು ಬೆಳಗ್ಗೆಯೇ ವೇಣುಗೋಪಾಲ್ ಸೇರಿದಂತೆ ಹಲವರು ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸಿದರು. ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಉಸ್ತುವಾರಿ ವೇಣುಗೋಪಾಲ್, ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿ ಇದೆ. ಜಾರಕಿಹೊಳಿ ಬ್ರದರ್ಸ್ ಬಂಡಾಯ ಅದೊಂದು ಸಮಸ್ಯೆಯೇ ಅಲ್ಲ. ಬಿಜೆಪಿ ಕಪ್ಪು ಹಣದ ಮೂಲಕ ಸರ್ಕಾರವನ್ನು ಕೆಡವಲು ಪ್ಲಾನ್ ಮಾಡ್ತಿದೆ ಅಂತ ಆರೋಪಿಸಿದರು. ಬಳಿಕ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಬಿಜೆಪಿಯವರು ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಬೀಳಿಸಲು ಯತ್ನಿಸ್ತಿಲ್ಲ. ಅವರ ವಿರುದ್ಧ ಸುಮ್ಮನೇ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
Advertisement
ನಾಳೆ ಮುಖ್ಯಮಂತ್ರಿ ಜನತಾದರ್ಶನ ಇಲ್ಲ
–
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು ಇಂದು ವಿಶ್ರಾಂತಿ ಪಡೆಯುತ್ತಿದ್ದಾರೆ.
ಸೋಮವಾರ ಅವರು ಕಲಬುರಗಿಗೆ ಭೇಟಿ ನೀಡಿ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಶನಿವಾರದಂದು ಮಾತ್ರ ಜನತಾದರ್ಶನ ನಡೆಸಲಾಗುವುದರಿಂದ ನಾಳೆ ಕಲಬುರಗಿಯಲ್ಲಿ ಜನತಾದರ್ಶನ ಇರುವುದಿಲ್ಲ .
— CM of Karnataka (@CMofKarnataka) September 16, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv