ತುಮಕೂರು: ಬುಧವಾರ ಎಚ್‍ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಬೆಳಗ್ಗೆ ಸುಮಾರು 8.35ಕ್ಕೆ ತುಮಕೂರು ವಿಶ್ವವಿದ್ಯಾಲಯದ ಹ್ಯಾಲಿಪ್ಯಾಡ್‍ಗೆ ಬಂದಿಳಿದು, ಅಲ್ಲಿಂದ ರಸ್ತೆ ಮೂಲಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಟ್ಟು ಶ್ರೀ ಶಿವಕುಮಾರ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
Advertisement
ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಠದಲ್ಲೇ ಸಿಎಂ ಕುಮಾರಸ್ವಾಮಿ ಉಪಾಹಾರ ಸ್ವೀಕರಿಸಲಿದ್ದಾರೆ. ಬಳಿಕ 11 ಗಂಟೆ ಸುಮಾರಿಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Advertisement
Advertisement
ಕುಮಾರಸ್ವಾಮಿ ನಾಳೆ ವಿಶ್ವಾಸಮತವನ್ನೂ ಸಾಬೀತು ಪಡಿಸಲಿದ್ದಾರೆ. ಇದಾದ ಕೂಡಲೇ ದೆಹಲಿಗೆ ಬರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ. ಪ್ರಮಾಣ ವಚನಕ್ಕೆ ಬಂದಿದ್ದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ವಿಶ್ವಾಸಮತಯಾಚನೆ ಬಳಿಕ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.
Advertisement
ಸಚಿವ ಸಂಪುಟದ ಆಯ್ಕೆ, 2ನೇ ಡಿಸಿಎಂ ನೇಮಕ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧಕ್ಕೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ನಾಳೆ ರಾತ್ರಿ ದೆಹಲಿಗೆ ತೆರಳಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.