Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಚಾಲನೆ ನೀಡಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಚಾಲನೆ ನೀಡಿದ ಸಿಎಂ

Bengaluru City

ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಚಾಲನೆ ನೀಡಿದ ಸಿಎಂ

Public TV
Last updated: September 23, 2024 6:06 pm
Public TV
Share
3 Min Read
CM Siddaramaiah 4
SHARE

-ಕುಡಿದು ವಾಹನ ಚಲಾಯಿಸುವವರ ಲೈಸೆನ್ಸ್ ರದ್ದುಪಡಿಸಲು ಸಿಎಂ ಸೂಚನೆ

ಬೆಂಗಳೂರು: ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್‌ಗಳ  ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದರು.

ರಸ್ತೆ ಅಪಾಘಾತಕ್ಕೀಡಾದವರ ಗೋಲ್ಡನ್ ಅವಧಿಯ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬುಲೆನ್ಸ್‌ಗಳ ಸೇವೆಗೆ ಇಂದು (ಸೆ.23ರಂದು) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಚಾಲನೆ ನೀಡಿದರು. ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಪ್ರತಿ ವರ್ಷ 40 ಸಾವಿರ ಅಪಘಾತ ಪ್ರಕರಣಗಳು ನಡೆಯುತ್ತಿವೆ. ಸರಾಸರಿ 10 ಸಾವಿರ ಜನರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಪ್ರತ್ಯೇಕವಾಗಿ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಅಂಬುಲೆನ್ಸ್‌ಗಳ ಸೇವೆಯನ್ನು ಒದಗಿಸುತ್ತಿದ್ದೇವೆ. ಮುಂಬರುವ ವರ್ಷದಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆ ವಿಸ್ತರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

CM Siddaramaiah Dinesh Gundurao Ramalinga reddy 1

ಸಾರಿಗೆ ಇಲಾಖೆ, ಗೃಹ, ಒಳಾಡಳಿತ ಇಲಾಖೆಗಳ ಸಹಕಾರದೊಂದಿಗೆ ರೋಡ್ ಸುರಕ್ಷತೆ ನಿಧಿಯಡಿ ಯೋಜನೆಯನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಅಂಬುಲೆನ್ಸ್‌ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಡುತ್ತಿದ್ದೇವೆ. ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಅಂಬುಲೆನ್ಸ್‌ಗಳಲ್ಲಿ 26 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (Advanced Life Support) ತಂತ್ರಜ್ಞಾನವನ್ನು ಅಳವಡಿಸಲಾಗಿದೆ. 39 ಬೇಸಿಕ್ ಲೈಫ್ ಸಪೋರ್ಟ್ (B‌asic Life Support) ಅಂಬುಲೆನ್ಸ್‌ಗಳಿವೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅಂತಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಅಂಬುಲೆನ್ಸ್‌ಗಳನ್ನು ನೀಡಲಾಗಿದೆ ಎಂದರು.

ರಸ್ತೆ ಅಪಘಾತಗಳ ಸಂದರ್ಭದಲ್ಲಿ ಗಾಯಾಳುಗಳು ಸಾವಿಗೀಡಾಗುವುದನ್ನು ತಡೆಯಲು, ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆಗೆ ನೆರವಾಗಲು “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ”ಯ ನೂತನ 65 ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳಿಸಲಾಗಿದೆ. ಸಂಪೂರ್ಣ ಉಚಿತ ಸೇವೆ ನೀಡುವ ಈ ಆಪತ್ಕಾಲಯಾನ ಸೇವೆಗಳ ವಿವರ ಇಲ್ಲಿದೆ.#HealthForAll… pic.twitter.com/ZlqSFygYp4

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 23, 2024

ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಪಘಾತಗಳ ಪ್ರಕರಣಗಳಲ್ಲಿ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ಆರೋಗ್ಯ ಇಲಾಖೆಯಿಂದ ಇಂದು 65 ಅಂಬುಲೆನ್ಸ್‌ಗಳನ್ನ ಜನಸೇವೆಗಾಗಿ ಮುಡಿಪಾಗಿಟ್ಟಿದ್ದೇವೆ. ರಾಜ್ಯದಾದ್ಯಂತ ಈ ಯೋಜನೆ ವಿಸ್ತರಿಸಲು ಬೇಕಾಗುವ ಹಣಕಾಸನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರದ ಜೊತೆ ಸಾರ್ವಜನಿಕರು ಸಹಕರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನ ಜನರು ಪಾಲಿಸಬೇಕು. ವೇಗವಾಗಿ ಚಲಿಸಿದರೆ ಅಪಘಾತ ಆಗಲಿದೆ ಎನ್ನುವುದು ಗೊತ್ತಿದ್ದರೂ ಕೆಲವರು ವೇಗವಾಗಿ ವಾಹನ ಚಲಾಯಿಸುತ್ತಾರೆ. ಇವನ್ನೆಲ್ಲ ಬಿಡಿ ಎಂದು ನಾಡಿನ ಜನರಿಗೆ ಕಿವಿಮಾತು ಹೇಳಿದರು. ಕುಡಿದು ವಾಹನ ಚಲಾಯಿಸುವವರು, ಅತಿ ವೇಗವಾಗಿ ಚಾಲನೆ ಮಾಡುವವರ ಲೈಸೆನ್ಸ್ ರದ್ದುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಇದೇ ವೇಳೆ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.

CM Siddaramaiah Dinesh gundurao ramalinga Reddy

ಇದೇ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಾತನಾಡಿ, ಈಗಾಗಲೇ ಯೋಜನೆಗೆ ರಸ್ತೆ ಸುರಕ್ಷತಾ ನಿಧಿಯಡಿ ನೆರವು ಒದಗಿಸಲಾಗಿದೆ. ಇನ್ನೂ ಹೆಚ್ಚಿನ ಅಂಬುಲೆನ್ಸ್‌ಗಳನ್ನ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡುವುದಾಗಿ ಘೋಷಿಸಿದರು. ರಸ್ತೆ ಸಂಚಾರದ ಅಪಘಾತಗಳಲ್ಲಿ ಗಾಯಾಳುಗಳು ಹಾಗೂ ಸಾವು ನೋವುಗಳನ್ನ ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅಪಘಾತ ಪ್ರಕರಣಗಳಿಗಾಗಿಯೇ ಪ್ರತ್ಯೇಕ ಅಂಬುಲೆನ್ಸ್‌ಗಳನ್ನು ಆರೋಗ್ಯ ಇಲಾಖೆ ಒದಗಿಸಿರುವುದು ಅತ್ಯಂತ ಉತ್ತಮ ನಿರ್ಧಾರವಾಗಿದ್ದು, ರಾಜ್ಯದಾದ್ಯಂತ ಯೋಜನೆ ವಿಸ್ತರಿಸಲು ಸಾರಿಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಅಂಬುಲೆನ್ಸ್‌ಗಳು ಹೇಗೆ ಕಾರ್ಯನಿರ್ವಹಿಸಲಿವೆ?
* ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಹತ್ತಿರದ ಆಸ್ಪತ್ರೆಗಳಲ್ಲಿ ಅಂಬುಲೆನ್ಸ್‌ಗಳು ತಂಗಲಿವೆ.

* 65 ಹಾಟ್‌ಸ್ಪಾಟ್‌ಗಳನ್ನ ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಅಂಬುಲೆನ್ಸ್‌ಗಳನ್ನು ನೀಡಲಾಗಿದೆ.

* ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ (ALS) ಅಂಬ್ಯುಲೆನ್ಸ್ ಸೇವೆ ಲಭ್ಯವಾಗಲಿದೆ.

* ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ಚಿಕಿತ್ಸೆ ಅಗತ್ಯವಾದಲ್ಲಿ ಆರೋಗ್ಯ ಇಲಾಖೆಯ ಸ್ಟಾಫ್ ನರ್ಸ್‌ನ್ನು ಅಂಬುಲೆನ್ಸ್‌ಗಳಿಗೆ ಡೆಪ್ಯೂಟ್ ಮಾಡಲಾಗುವುದು.

* ವೆಂಟೀಲೇಟರ್ ಸಹಾಯದೊಂದಿಗೆ ಜಿಲ್ಲಾಸ್ಪತ್ರೆಗಳಿಗೆ ರೋಗಿಗಳನ್ನ ಕರೆದೊಯ್ದು ಚಿಕಿತ್ಸೆ ಕೊಡಿಸುವ ಸೌಲಭ್ಯ ಒದಗಿಸಲಾಗಿದೆ.

* ಅಂಬುಲೆನ್ಸ್‌ಗಳು ಸುಸಜ್ಜಿತ ಉಪಕರಣಗಳು, ಔಷಧಿ ಹಾಗೂ ಉಪಭೋಗ್ಯ ವಸ್ತುಗಳನ್ನು ಹೊಂದಿರಲಿವೆ. ಈ ಪ್ರಕ್ರಿಯೆಯು ಅಪಘಾತಕ್ಕೆ ಒಳಗಾದ ವ್ಯಕ್ತಿಯ ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಅಲ್ಲದೇ ಸ್ಥಳಾಂತರಕ್ಕೆ ರೋಗಿಗಳ ಸ್ವಂತ ಹಣದ ವ್ಯಯವನ್ನು ತಪ್ಪಿಸಲಿದೆ.ಇದನ್ನೂ ಓದಿ: ಪ್ರಸಾದದಲ್ಲಿ ಕಲಬೆರಕೆ, ಅಪವಿತ್ರಕ್ಕೆ ಡೋಂಟ್ ಕೇರ್ – ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದಕ್ಕೆ ಮುಗಿಬಿದ್ದ ಭಕ್ತರು

TAGGED:ambulancebengalurucm siddaramaiahdinesh gunduraolicense cancelRamalinga reddyRoad Accidentಆಪತ್ಕಾಲಯಾನದಿನೇಶ್ ಗುಂಡೂರಾವ್ಬೆಂಗಳೂರುರಸ್ತೆ ಅಪಾಘಾತರಾಮಲಿಂಗಾ ರೆಡ್ಡಿಲೈಸೆನ್ಸ್ ರದ್ದುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi SIddramaiah
Bengaluru City

HALನಲ್ಲಿ ಪ್ರಧಾನಿ ಮೋದಿ ಸ್ವಾಗತಿಸಿದ ಸಿಎಂ –  ರಾಜ್ಯಕ್ಕೆ ಸಂಬಂಧಿಸಿದ 18 ಬೇಡಿಕೆಗಳ ಪಟ್ಟಿ ಕೊಟ್ಟ ಸಿದ್ದರಾಮಯ್ಯ

Public TV
By Public TV
10 minutes ago
yogesh gowda
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ಮಧ್ಯಾಹ್ನ 3 ಗಂಟೆಗೆ ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ

Public TV
By Public TV
14 minutes ago
PM Modi Sri Guru Bhairavaikya Mandira
Latest

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

Public TV
By Public TV
20 minutes ago
basavaraj koravar react on his friend yogesh gowda murder case
Bengaluru City

ಯೋಗೇಶ್ ಗೌಡ ಹತ್ಯೆ ಕೇಸ್‌ | ತೀರ್ಪು ನಮ್ಮ ಪರ ಬರದಿದ್ರೆ ಹೋರಾಟ ಮುಂದುವರಿಯಲಿದೆ: ಬಸವರಾಜ್ ಕೊರವರ್

Public TV
By Public TV
47 minutes ago
vinay kulkarni 1
Bengaluru City

ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ: ತೀರ್ಪಿಗೂ ಮುನ್ನ ವಿನಯ್ ಕುಲಕರ್ಣಿ ರಿಯಾಕ್ಷನ್

Public TV
By Public TV
1 hour ago
Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ-ಇರಾನ್‌ ಸಂಧಾನ – ಪಾಕಿಸ್ತಾನದಲ್ಲೇ 2ನೇ ಸುತ್ತಿನ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?