– ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯಕ್ಕೆ ಅಶೋಕ್ ಖಂಡನೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ಪ್ರಕರಣವನ್ನು ವಿಪಕ್ಷ ನಾಯಕ ಅಶೋಕ್ (R Ashok) ಖಂಡಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು – ಸಿ.ಟಿ.ರವಿ
ಎಕ್ಸ್‌ನಲ್ಲಿ ಏನಿದೆ?
ಕಾಂಗ್ರೆಸ್ ಪಕ್ಷದ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನುಷ ಘಟನೆ ನಡೆದಿದ್ದು, ಈ ಲಜ್ಜೆಗೆಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಎಗ್ಗಿಲ್ಲದೆ ನಡೆಯುತ್ತಿರುವ ದ್ವೇಷ ರಾಜಕಾರಣಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಇದನ್ನೂ ಓದಿ: ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್ ಇದೆ: ಹು-ಧಾ ಆಯುಕ್ತ ಶಶಿಕುಮಾರ್
ಕಾಂಗ್ರೆಸ್ ಸರ್ಕಾರದಲ್ಲಿ ದಿನ ಬೆಳಗಾದರೆ ವಿಪಕ್ಷ ಶಾಸಕರ ಮೇಲೆ ಕೊಲೆ ಯತ್ನ, ವಿಪಕ್ಷ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯ ಇವೆಲ್ಲವೂ ಸರ್ವೇ ಸಾಮಾನ್ಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಅಮಾನುಷ ಕೃತ್ಯ – ಪೊಲೀಸರಿಂದಲೇ ಬಿಜೆಪಿ ಕಾರ್ಯಕರ್ತೆಗೆ ಬಟ್ಟೆಬಿಚ್ಚಿ ಥಳಿಸಿದ ಆರೋಪ!

