ಬೆಂಗಳೂರು: ಮುಂಬರುವ ಚುನಾವಣೆಗೆ ಬಿಜೆಪಿಯಿಂದ ಹಿಂದುತ್ವ ಅಜೆಂಡಾ ಘೋಷಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಸಭೆ ನಡೆಯಲಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು, ಎಸ್.ಪಿ.ಗಳು, ಪೊಲೀಸ್ ಆಯುಕ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಪ್ರಮುಖವಾಗಿ ಬಿಜೆಪಿ ಹಿಂದುತ್ವ ಅಜೆಂಡಾ ಮುಂದಿಟ್ಟಿಕೊಂಡು ಚುನಾವಣೆ ಅಖಾಡಕ್ಕೆ ಧುಮುಕುವ ಮುನ್ಸೂಚನೆ ನೀಡಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ಬಗ್ಗೆ ಎಚ್ಚರ ವಹಿಸುವಂತೆ ಸಿಎಂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುವ ಸಾಧ್ಯತೆ ಇದೆ. ಇದಲ್ಲದೆ ಇಂದಿನಿಂದ ಪ್ರಾರಂಭವಾಗುವ ಬಿಜೆಪಿ ಪರಿವರ್ತನಾ ಯಾತ್ರೆಯ ಸಂಬಂಧ ಭದ್ರತೆ, ಸಭೆಗೆ ಅನುಮತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದೆ.
Advertisement
ಉಳಿದಂತೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್, ಮಂಗಳೂರು ಕೋಮು ಗಲಭೆ ವಿಚಾರಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಸಿಎಂ ಹಿರಿಯ ಪೊಲೀಸ್ ಅಧಿಕಾರಿಗಳ ಖಡಕ್ ಸೂಚನೆ ನೀಡುವ ಸಾಧ್ಯತೆ ಇದೆ.