ಬೆಂಗಳೂರು: ಸಿದ್ದರಾಮಯ್ಯ (Siddaramaiah) ರಾಜೀನಾಮೆಗೂ ಮುನ್ನ ಸಿಎಂ ಕಚೇರಿ (CM Office) ಸಿಬ್ಬಂದಿಗೆ ವರ್ಗಾವಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಅವರನ್ನು ಕೃಷಿ ಮತ್ತು ಮಾರಾಟ ಇಲಾಖೆಯ ನಿರ್ದೇಶಕರಾಗಿ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿಗೆ ಕೆಪಿಟಿಸಿಎಲ್ ನಿರ್ದೇಶಕರಾಗಿ ವರ್ಗಾವಣೆ ಮಾಡಿದ್ದಾರೆ.ಇದನ್ನೂ ಓದಿ: ಸಂವಿಧಾನವೇ ನನ್ನ ಧರ್ಮ, ಮತದಾರರೇ ನನ್ನ ಅಭಿಮಾನಿ ದೇವರು: ಸಿದ್ದರಾಮಯ್ಯ
ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯಿಂದ ಕೆಳಗಿಳಿದರೆ ಸೂಕ್ತ ಸ್ಥಾನ, ಹುದ್ದೆ ನೀಡುವ ಬಗ್ಗೆ ಅನುಮಾನವಿದ್ದ ಹಿನ್ನೆಲೆ ಮೊದಲೇ ಹುದ್ದೆ ನೀಡಿ ಆದೇಶ ಹೊರಡಿಸಿ, ಆಪ್ತ ಮತ್ತು ಬೆಂಬಲಿಗ ಅಧಿಕಾರಗಳ ರಕ್ಷಣೆಗೆ ಮುಂದಾಗಿದ್ದಾರೆ.
