Connect with us

Corona

ಸಿಎಂ ಪಿಣರಾಯಿ ವಿಜಯನ್‍ಗೆ ಕೊರೊನಾ ಪಾಸಿಟಿವ್

Published

on

ತಿರುವನಂತಪುರ: ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ.

ಕೋವಿಡ್-19 ಸೋಂಕು ದೃಢಪಟ್ಟಿದ್ದು, ಕೋಜಿಕ್ಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದೇನೆ. ನನ್ನ ಸಂಪರ್ಕದಲ್ಲಿ ಬಂದವರು ನಿಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸಿ ಎಂದು ಸಿಎಂ ಪಿಣರಾಯಿ ವಿಜಯನ್ ಮನವಿ ಮಾಡಿಕೊಂಡಿದ್ದಾರೆ.

ಇದಕ್ಕೂ ಮೊದಲು ಏಪ್ರಿಲ್ 6ರಂದು ವಿಜಯನ್ ಅವರ ಪುತ್ರಿ ವೀಣಾ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಸದ್ಯ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಬುಲೆಟಿನ್ ಬಿಡುಗಡೆಗೊಳಿಸಿದೆ. ಮಾರ್ಚ್ 3ರಂದು ಪಿಣರಾಯಿ ವಿಜಯನ್ ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದರು.

Click to comment

Leave a Reply

Your email address will not be published. Required fields are marked *