ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಸಂಪುಟ ದರ್ಜೆಯ ಸ್ಥಾನಮಾನವನ್ನು ರೇಣುಕಾಚಾರ್ಯ ಅವರಿಗೆ ನೀಡಲಾಗಿದ್ದು, ಈ ಬಗ್ಗೆ ರೇಣುಕಾಚಾರ್ಯ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಮಂತ್ರಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರು ಆಕ್ರೋಶಗೊಂಡಿದ್ದರು. ಸಂಪುಟ ವಿಸ್ತರಣೆ ಬಳಿಕ ಡಿಸಿಎಂ ಲಕ್ಷ್ಮಣ ಸವದಿ, ಅಬಕಾರಿ ಸಚಿವ ನಾಗೇಶ್ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದರು. ಪರಿಣಾಮ ಅವರ ಮನವೊಲಿಸಲು ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಆಪ್ತನಿಗೆ ಬಿಎಸ್‍ವೈ ನೀಡಿದ್ದಾರೆ ಎನ್ನಲಾಗಿದೆ.