ಗದಗ: ಸಿಎಂ ಸ್ಥಾನ ಖಾಲಿ ಇಲ್ಲ. ಖಾಲಿ ಆಗುವ ಪ್ರಶ್ನೆಯೂ ಇಲ್ಲ ಎಂದು ಕಾನೂನು, ನ್ಯಾಯ, ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ (H K Patil) ಸಿಎಂ ಸ್ಥಾನ ಬದಲಾವಣೆ ವಿಚಾರವಾಗಿ ಕಿಡಿಕಾರಿದರು.
ಗದಗ ಹೊರವಲಯದ ನಾಗಾವಿ ಬಳಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (Karnataka State Rural Development and Panchayat Raj University) ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಖಾಲಿ ಇಲ್ಲ. ಖಾಲಿ ಆಗುವ ಪ್ರಶ್ನೆಯೂ ಇಲ್ಲ. ಸಿದ್ದರಾಮಯ್ಯನವರೇ (CM Siddaramaiah) ನಮ್ಮ ಸಿಎಂ ಹಾಗೂ ನಮ್ಮ ನಾಯಕರು. ಅನಾವಶ್ಯಕವಾಗಿ ಸಿಎಂ ಸ್ಥಾನದ ಬಗ್ಗೆ ಮಾಧ್ಯಮದವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು.ಇದನ್ನೂ ಓದಿ: ರಾಹುಲ್ ಹೇಳಿಕೆ ಉಲ್ಲೇಖಿಸಿ ಪ್ರತ್ಯೇಕ ಖಲಿಸ್ತಾನ ರಾಷ್ಟ್ರ ಬೇಡಿಕೆ ಮುಂದಿಟ್ಟ ಉಗ್ರ ಪನ್ನುನ್
Advertisement
Advertisement
ಸಿಎಂ ಸ್ಥಾನದ ರೇಸ್‌ನಲ್ಲಿ ಹೆಚ್.ಕೆ.ಪಾಟೀಲ್ ಹೆಸರು ಕೇಳಿ ಬರುತ್ತಿರುವ ವಿಷಯವಾಗಿ ಮಾತನಾಡಿ, ಸಿಎಂ ಸ್ಥಾನ ಖಾಲಿಯೂ ಇಲ್ಲ. ಆ ಪ್ರಶ್ನೆ ಉದ್ಭವಿಸುವುದಿಲ್ಲ, ಇದು ಸಮಯವೂ ಅಲ್ಲ. ಈ ಬಗ್ಗೆ ಅನಾವಶ್ಯಕ ಚರ್ಚೆಯನ್ನು ವಿವೇಕ ಇದ್ದವರು ಮಾಡೋದಿಲ್ಲ ಎಂದು ಸಿಡಿಮಿಡಿಗೊಂಡರು.
Advertisement
ಸರ್ಕಾರ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆ, ಪ್ರಗತಿ, ಸಮನ್ವಯ ಕಾರ್ಯಗಳಿಗೆ ಸಂಬಂಧಿಸಿದ ಸಚಿವರು ಕ್ರಮವಹಿಸಲು ಸಮಿತಿ ರಚನೆಯ ಕುರಿತು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರು ಗೃಹ ಸಚಿವರ ಅಧ್ಯಕ್ಷತೆಯಲ್ಲಿ 5 ಜನ ಸಚಿವರ ಸಮಿತಿ ರಚಿಸಿದ್ದಾರೆ. ಪ್ರಮಾದಗಳು, ತಪ್ಪು ಎಸಗಿರುವ ಬಗ್ಗೆ ತನಿಖೆ ಹಾಗೂ ಮುಂದಿನ ಕ್ರಮಗಳನ್ನು ಶಿಫಾರಸು ಮಾಡಲು ಈ ಬಗ್ಗೆ ನಮ್ಮ ಸಮಿತಿ ಬೇಗ ಕೆಲಸ ಮಾಡಲು ಪ್ರಾರಂಭ ಮಾಡಲಿದೆ ಎಂದರು.ಇದನ್ನೂ ಓದಿ: ರಾಜ್ಯದ ಅರಣ್ಯ ಸಿಬ್ಬಂದಿಗೂ ಪೊಲೀಸ್ ಕ್ಯಾಂಟೀನ್ ಸೌಲಭ್ಯ: ಈಶ್ವರ ಖಂಡ್ರೆ
Advertisement
ವಾಲ್ಮೀಕಿ ನಿಗಮ ಹಗರಣ (Valmiki Scam) ಕುರಿತು ಮಾತನಾಡಿ, ವಾಲ್ಮೀಕಿ ನಿಗಮ ಹಗರಣ ಬಗ್ಗೆ ಎಸ್‌ಐಟಿ ಹಾಗೂ ಇಡಿ ತಂಡ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಕಾನೂನು ಕ್ರಮ, ಕಾನೂನು ಪ್ರಕ್ರಿಯೆ ಮುಂದುವರೆಯುತ್ತದೆ. ಕೋರ್ಟ್ಗಳ ಮೂಲಕ ಸತ್ಯಾಸತ್ಯತೆ ಹೊರಬರುತ್ತದೆ. ಸತ್ಯಾಸತ್ಯತೆ ಕೋರ್ಟ್‌ನಲ್ಲಿ ನಡೆಯುವ ಪ್ರಕರಣವನ್ನು ಹೊರಹಾಕುತ್ತದೆ ಎಂದು ಹೇಳಿದರು.
ಅಮೆರಿಕಾದಲ್ಲಿ ರಾಹುಲ್ ಗಾಂಧಿ (Rahul Gandhi) ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಭಾರತ ಚುನಾವಣೆ ವ್ಯವಸ್ಥೆ, ಬೇರೆ ವಿಷಯ ಏನಿಲ್ಲದಿದ್ದರೂ ಬಿಜೆಪಿಯವರು ಇಲ್ಲದ ಕಾರಣ ಹುಡುಕುವ ಪ್ರಯತ್ನ ಮಾಡುತ್ತಾರೆ. ರಾಹುಲ್ ಗಾಂಧಿ ಅವರು ಏನು ಹೇಳಿಕೆ ಕೊಟ್ಟಿರುತ್ತಾರೆ, ಅದನ್ನು ಗಮನಿಸಿಕೊಂಡು ತಿದ್ದಿಕೊಳ್ಳುವ ಪ್ರಯತ್ನ ಮಾಡಬೇಕೆ ವಿನಃ ಟೀಕೆ ಮಾಡುವುದಕ್ಕೆ ಅದನ್ನು ಬಳಕೆ ಮಾಡಿಕೊಳ್ಳಬಾರದು. ಬಿಜೆಪಿಯವರು ರಾಹುಲ್ ಗಾಂಧಿ ಅವರನ್ನು ಎಷ್ಟೇ ಅವಹೇಳನ ಮಾಡಲು ಪ್ರಯತ್ನ ಮಾಡಲಿ. ನಮ್ಮ ದೇಶದ ಜನರು ರಾಹುಲ್ ಗಾಂಧಿಯವರನ್ನು ಎತ್ತರದ ನಾಯಕ ಎಂದು ಗುರುತಿಸಿದ್ದಾರೆ. ಬಿಜೆಪಿಯವರು ಏನು ಮಾಡಿದರೂ ಅವರ ಉದ್ದೇಶ ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.