ಬೆಂಗಳೂರು: ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಿಂದ ಬಿಗ್ ರಿಲೀಫ್ ಸಿಕ್ಕಿದರೂ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮುಂದುವರಿಯಬೇಕಾದರೆ 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಟ 6 ಕ್ಷೇತ್ರಗಳನ್ನು ಗೆಲ್ಲಬೇಕಿದೆ.
ಹೌದು. ಕರ್ನಾಟಕ ವಿಧಾನಸಭೆ ಬಲಾಬಲ 224 ಆಗಿದ್ದು ಒಬ್ಬರು ಅಂಗ್ಲೋ ಇಂಡಿಯನ್ ಸದಸ್ಯರಿದ್ದಾರೆ. 17 ಮಂದಿ ಶಾಸಕರು ಅನರ್ಹಗೊಂಡ ಪರಿಣಾಮ ಬಲ 207ಕ್ಕೆ ಕುಸಿದಿದೆ. ಬಹುಮತ ಸಾಧಿಸಲು 104 ಶಾಸಕರು ಬೆಂಬಲ ಬೇಕಿದ್ದ ಪರಿಣಾಮ ಬಿಜೆಪಿ 105 ಜನ ಶಾಸಕರ ಜೊತೆ ಓರ್ವ ಪಕ್ಷೇತರ ಶಾಸಕರ ಬೆಂಬಲ ಇದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ 66, ಜಿಡಿಎಸ್ 34 ಶಾಸಕರಿದ್ದರೆ ಬಿಎಸ್‍ಪಿಯಿಂದ ಉಚ್ಚಾಟಿದ ಶಾಸಕ ಮಹೇಶ್ ಇದ್ದಾರೆ.
Advertisement
Advertisement
15 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಪರಿಣಾಮ ವಿಧಾನಸಭೆಯ ಬಲಾಬಲ 222+1 ಏರಿಕೆ ಆಗಲಿದೆ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ 112 ಶಾಸಕರ ಬೆಂಬಲ ಬೇಕಿದ್ದು, ಬಿಎಸ್‍ವೈ ಸಿಎಂ ಪಟ್ಟ ಉಳಿಸಿಕೊಳ್ಳಬೇಕಾದರೆ ಕನಿಷ್ಟ 6 ಕ್ಷೇತ್ರಗಳಲ್ಲಿ ಜಯಗಳಿಸಲೇಬೇಕಿದೆ.
Advertisement
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಡಿ.5 ರಂದು ಮತದಾನ ನಡೆಯಲಿದ್ದು ಡಿ.9 ಸೋಮವಾರದಂದು ಫಲಿತಾಂಶ ಪ್ರಕಟವಾಗಲಿದೆ.
Advertisement
ಈ 15 ಕ್ಷೇತ್ರಗಳ ಪೈಕಿ ಉತ್ತರ ಕರ್ನಾಟಕ ಮತ್ತು ಬೆಂಗಳೂರು ನಗರ ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿಡಿತವಿದೆ. ಆದರೆ ಹಳೆ ಮೈಸೂರು ಭಾಗವಾದ ಕೆ.ಆರ್.ಪೇಟೆ, ಹುಣಸೂರು, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರವಾದ ಸ್ಪರ್ಧೆ ಇದೆ. ಆದರೆ ಲೋಕಸಭೆಯಲ್ಲಿ ಚಿಕ್ಕಬಳ್ಳಾಪುರ, ಮೈಸೂರಿನಲ್ಲಿ ಬಿಜೆಪಿ ಗೆದ್ದಿದ್ದು, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆದ್ದಿದ್ದಾರೆ.
2 ಕ್ಷೇತ್ರಗಳಿಗೆ ಇಲ್ಲ:
ಆನರ್ಹ ಶಾಸಕರ 17 ಕ್ಷೇತ್ರದ ಪೈಕಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹಾಗೂ ರಾಯಚೂರಿನ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ಚುನಾವಣೆ ನಡೆಯುತ್ತಿಲ್ಲ. 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಸಾವಿರಾರು ಗುರುತಿನ ಚೀಟಿ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಅನರ್ಹ ಶಾಸಕ ಮುನಿರತ್ನ ಹೆಸರನ್ನು ಜಾಲಹಳ್ಳಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಕೈಬಿಟ್ಟಿದ್ದರು. ಇದನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಪಿ.ಎಂ ಮುನಿರಾಜುಗೌಡ 7ನೇ ಎಸಿಎಂಎಂ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮುನಿರತ್ನ ಅವರನ್ನು ಆರೋಪಿಯನ್ನಾಗಿ ಮಾಡಬೇಕು ಎಂಬುವುದು ಅವರ ವಾದವಾಗಿದೆ. ಈ ಪ್ರಕರಣ ಕೋರ್ಟಿನಲ್ಲಿ ಇರುವುದರಿಂದ ಈ ಕ್ಷೇತ್ರದ ಉಪ ಚುನಾವಣೆ ತಡೆ ಹಿಡಿಯಲಾಗಿದೆ.
ಇನ್ನು ಬೋಗಸ್ ಮತದಾನ ಪ್ರಕರಣ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆಯಿಲ್ಲ. ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ 213 ಮತದ ಅಂತರದಿಂದ ಸೋತಿದ್ದ ಬಸನಗೌಡ ತುರ್ವಿಹಾಳ ಅವರು ಕೋರ್ಟಿನಲ್ಲಿ ದೂರು ದಾಖಲಿಸಿದ್ದಾರೆ. ಪ್ರತಾಪ್ ಗೌಡ ಪುತ್ರಿ ವಿದೇಶದಲ್ಲಿದ್ದರು ಕೂಡ ಅವರ ಮತ ಚಲಾವಣೆಯಾಗಿತ್ತು. ಹೀಗಾಗಿ ಶಾಸಕತ್ವ ಅಸಿಂಧುಗೊಳಿಸುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ. ಉಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣ ಬಾಕಿಯಿದ್ದು, ಬೋಗಸ್ ಮತದಾನ ನಡೆಯದಿದ್ದರೆ ನಾನೇ ಗೆಲ್ಲುತ್ತಿದ್ದೆ ಎನ್ನುವುದು ಬಸನಗೌಡ ತುರ್ವಿಹಾಳ ವಾದ. ಹೀಗಾಗಿ ಎರಡು ಪ್ರಕರಣ ಕೋರ್ಟಿನಲ್ಲಿ ಇರುವ ಕಾರಣದಿಂದ 2 ಕ್ಷೇತ್ರಗಳ ಉಪಚುನಾವಣೆ ಕೋರ್ಟ್ ತೀರ್ಪು ಬರುವವರೆಗೂ ಕೈ ಬಿಡಲಾಗಿದೆ.