Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ

Bengaluru City

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ: ಡಿಕೆಶಿ

Public TV
Last updated: November 26, 2025 8:19 pm
Public TV
Share
3 Min Read
DK Shivakumar 7
SHARE

ಬೆಂಗಳೂರು: ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ತಿಳಿಸಿದರು.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ನಾನು ಪಕ್ಷದ ಅಧ್ಯಕ್ಷ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರು. ಜೊತೆಗೆ ನಾವಿಬ್ಬರು ಆತ್ಮೀಯ ಸ್ನೇಹಿತರು. ಇಬ್ಬರ ಬಾಂಧವ್ಯ ಚೆನ್ನಾಗಿದೆ. ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದೇವೆ. ನಾನು ಮತ್ತು ಸತೀಶ್ ಇಬ್ಬರೂ ಪ್ರಸ್ತುತ ಒಂದೇ ಸಂಪುಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಸತೀಶ್ ಜಾರಕಿಹೊಳಿ ಅವರು ಪಕ್ಷದ ದೊಡ್ಡ ಆಸ್ತಿ. ನಾವು ನಮ್ಮ ಕೆಲಸ ಮುಂದುವರೆಸಿಕೊಂಡು ಹೋಗುತ್ತೇವೆ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಮಿಕ್ಕ ಸಮಯದಲ್ಲಿ ಏನೇನು ಕೆಲಸಗಳನ್ನು ಮಾಡಬೇಕು ಎಂದು ಚರ್ಚೆ ನಡೆಸಲಾಗಿದೆ. ಇದು ಬಿಟ್ಟರೆ ಮಾತುಕತೆಯಲ್ಲಿ ಬೇರೆ ವಿಶೇಷತೆ ಏನಿಲ್ಲ ಎಂದರು.

ನನ್ನ ಸಂಖ್ಯೆ 140
ನನ್ನದು ಯಾವುದೇ ಬಣವಿಲ್ಲ. ಒಂದು ಬಣವಿದೆ, ಅದು ‘ಕಾಂಗ್ರೆಸ್ ಬಣ’.‌ ನನ್ನ ಸಂಖ್ಯೆ 140. ಸಾಮೂಹಿಕ ನಾಯಕತ್ವದಲ್ಲಿ ಈ ಪಕ್ಷವನ್ನು ಕಟ್ಟಲಾಗಿದೆ. ಪಕ್ಷಕ್ಕೆ ನಾನೊಬ್ಬನೆ ದುಡಿದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ, ಸಿದ್ದರಾಮಯ್ಯ ಅವರು ಹಾಗೂ ಎಲ್ಲಾ ಶಾಸಕರ ಶ್ರಮದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದೇವೆ. ಇದನ್ನು ಉಳಿಸಿಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಹಾಗೂ ನಾನು ಭೇಟಿ ಮಾಡಿ ಚರ್ಚಿಸಿದ್ದೇವೆ. ಇಲ್ಲಿ ಯಾವುದೇ ವೈಯಕ್ತಿಕ ವಿಚಾರಗಳಿಲ್ಲ. ಅದನ್ನೆಲ್ಲಾ ಪಕ್ಷ ತೀರ್ಮಾನ ಮಾಡುತ್ತದೆ. ಪಕ್ಷ ನಮ್ಮನ್ನು ಗುರುತಿಸಿದೆ. ನಾನು, ಸಿದ್ದರಾಮಯ್ಯ ಅವರು ಹಾಗೂ ಪಕ್ಷದ ಎಲ್ಲಾ ಸಚಿವರು, ಶಾಸಕರು, ಪಂಚಾಯತಿಯಿಂದ ಹಿಡಿದು ಪಾರ್ಲಿಮೆಂಟ್ ವರೆಗೂ ಎಲ್ಲ ಚುನಾವಣೆಯಲ್ಲೂ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಹುದ್ದೆ ಮುಖ್ಯವಲ್ಲ
ಮುಖ್ಯಮಂತ್ರಿ ಹುದ್ದೆ ಅಥವಾ ಉನ್ನತ ಅಧಿಕಾರ ಮುಖ್ಯವಲ್ಲ. ಪಕ್ಷದ ಎಲ್ಲರೊಡನೆ ಒಟ್ಟಾಗಿ ಕೆಲಸ ಮಾಡಿ, ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ‌ ತರುವುದು ಮುಖ್ಯ. ಮುಖ್ಯಮಂತ್ರಿಯವರು ಸಂಪುಟ ಪುನರ್ ರಚನೆ ಮಾಡಲಾಗುವುದು ಎಂದಿದ್ದಾರೆ. ಎಲ್ಲರಿಗೂ ಮಂತ್ರಿಯಾಗಬೇಕು ಎನ್ನುವ ಆಸೆ ಇರುತ್ತದೆ. ಆದ ಕಾರಣಕ್ಕೆ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ. ಸಚಿವ ಸ್ಥಾನದ ಆಕಾಂಕ್ಷೆ ಇರುವುದರ ಬಗ್ಗೆ ನಾನು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ನನ್ನ ಪರವಾಗಿ ಯಾರೂ ಮಾತನಾಡುವುದು ಬೇಡ. ಪಕ್ಷ ಸೂಕ್ತ ಸಮಯದಲ್ಲಿ ಸರಿಯಾದ ನಿರ್ಣಯ ಕೈಗೊಳ್ಳಲಿದೆ. ಅಧಿಕಾರದ ಬಗ್ಗೆ ಏನೇ ಚರ್ಚೆಯಗಿದ್ದರೂ ಅದು ನಾಲ್ಕು ಗೋಡೆಗಳ ಮಧ್ಯೆ ಆಗಿದೆ. ಅದನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ ಎಂದರು.

ಮುಖ್ಯಮಂತ್ರಿ ಹುದ್ದೆ, ಅಧಿಕಾರ ಹಸ್ತಾಂತರ ಈ ಎಲ್ಲದರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರು, ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ಅವರು ಸೇರಿದಂತೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸುತ್ತಾರೆ. ಅವರುಗಳು ಸೂಕ್ತ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಒಕ್ಕಲಿಗನಾಗಿ ಹುಟ್ಟಿದ್ದೇನೆ
ನಾನು ಒಕ್ಕಲಿಗರ ನಾಯಕ ಎಂದು ಯಾವಾಗ ಹೇಳಿದ್ದೇನೆ? ನಾನು ಕಾಂಗ್ರೆಸ್ ಪಕ್ಷದ ನಾಯಕ. ಒಕ್ಕಲಿಗನಾಗಿ ಹುಟ್ಟಿದ್ದೇನೆ ಅಷ್ಟೇ. ಇದರಲ್ಲಿ ಅನುಮಾನವಿಲ್ಲ. ನಾವು ಬಿಟ್ಟರು ಧರ್ಮ ಮತ್ತು ಜಾತಿ ನಮ್ಮನ್ನು ಬಿಡುವುದಿಲ್ಲ. ಅಶೋಕ್ ಅವರೇ ಒಕ್ಕಲಿಗರ ನಾಯಕ ಪದ ತೆಗೆದುಕೊಂಡು, ಬ್ಯಾಡ್ಜ್ ಹಾಕಿಕೊಂಡಿದ್ದಾರೆ.‌ ನಾನೇ ಅವರಿಗೆ ಒಕ್ಕಲಿಗ ನಾಯಕ ಬ್ಯಾಡ್ಜ್ ಕಳಿಸಿಕೊಡುತ್ತೇನೆ. ಅದನ್ನು ಅಶೋಕಣ್ಣ ಹಾಕಿಕೊಳ್ಳಲಿ. ಚಕ್ರವರ್ತಿ, ಸಾಮ್ರಾಟ್ ಅಶೋಕ್ ಎನ್ನುವ ಒಳ್ಳೆ ಪದವಿ ಅಶೋಕಣ್ಣನಿಗೆ ಇದೆ ಎಂದು ವ್ಯಂಗ್ಯವಾಡಿದರು.

ಸಂವಿಧಾನ ಕಾಂಗ್ರೆಸ್ ಕೊಡುಗೆ
ಈ ದೇಶಕ್ಕೆ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜ ಇದೆಲ್ಲವೂ ಕಾಂಗ್ರೆಸ್ ಪಕ್ಷದ ಕೊಡುಗೆ. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಸಂವಿಧಾನವು ಈ ದೇಶದ ಸರ್ವರ ಹಿತವನ್ನು ಕಾಪಾಡುತ್ತಿದೆ. ಪ್ರತಿಯೊಬ್ಬರ ಹಕ್ಕನ್ನು ರಕ್ಷಿಸುತ್ತಿದೆ. ಪ್ರಪಂಚದ ನಾನಾ ದೇಶಗಳು ನಮ್ಮ ಸಂವಿಧಾನವನ್ನು ಮೆಚ್ಚುತ್ತಿವೆ. ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎನ್ನುವ ಹೊಸ ಘೋಷಣೆ ನೀಡಲಾಗಿದೆ. ಇದನ್ನು ನಾವೆಲ್ಲರೂ ಮುಂದುವರೆಸಿಕೊಂಡು ಹೋಗಲಿದ್ದೇವೆ. ಭಗವದ್ಗೀತೆ, ಬೈಬಲ್, ಕುರಾನ್ ಸೇರಿದಂತೆ ಎಲ್ಲಾ ಪವಿತ್ರ ಗ್ರಂಥಗಳಷ್ಟೇ ಶ್ರೇಷ್ಠ ಗ್ರಂಥ ನಮ್ಮ ಸಂವಿಧಾನ ಎಂದರು.

TAGGED:bengalurud k shivakumarಡಿ.ಕೆ.ಶಿವಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
28 minutes ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
31 minutes ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
42 minutes ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
1 hour ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
2 hours ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?