ಪಣಜಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸುತ್ತಿದೆ. ಇದನ್ನು ನೋಡಿ ಗೋವಾದ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ (Manohar Parrikar) ಅವರು ನಗುತ್ತಿರಬಹುದು ಎಂದು ಸಿಎಂ ಪ್ರಮೋದ್ ಸಾವಂತ್ (Pramod Sawant) ಅವರ ಪತ್ನಿ ಸುಲಕ್ಷಣಾ ಸಾವಂತ್ (Sulakshana Sawant) ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಗೋವಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆಯೂ ಆಗಿರುವ ಸುಲಕ್ಷಣಾ, 2012ರಲ್ಲಿ ಬಿಜೆಪಿ ಪೂರ್ಣ ಬಹುಮತಗಳಿಸಿತ್ತು. ಅದೇ ಚಿತ್ರಣವನ್ನು 2022ರಲ್ಲಿಯೂ ನೋಡುತ್ತಿದ್ದೇವೆ. ಈ ವಿಜಯಕ್ಕಾಗಿ ಕಾರ್ಯಕರ್ತರು ಹೇಗೆ ಒಗ್ಗಟ್ಟಾಗಿ ಶ್ರಮಿಸಿದರು ಎಂಬುದನ್ನು ಕಂಡು ಅಣ್ಣ ಮನೋಹರ್ ಪರಿಕ್ಕರ್ ಸಂತಸಗೊಂಡಿರಬಹುದು ಎಂದು ನನಗನಿಸುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ಈ ಜಯ ಪಕ್ಷದ ಕಾರ್ಯಕರ್ತರು ತಮ್ಮಿಂದ ಸಾಧ್ಯವಾದ ಮಟ್ಟಿಗೆ ಮಾಡಿದ ಸಾಮೂಹಿಕ ಪ್ರಯತ್ನದ ಫಲ. ಪ್ರಮೋದ್ ಸಾವಂತ್ ನಾಯಕತ್ವದಲ್ಲಿ ನಾವು ಮ್ಯಾಜಿಕ್ ನಂಬರ್ 21ನ್ನು ತಲುಪಿದ್ದೇವೆ. ಅಭಿವೃದ್ಧಿ ಮತ್ತು ಡಬಲ್ ಎಂಜಿನ್ ಸರ್ಕಾರಕ್ಕೆ ಸಿಕ್ಕ ಮತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಅವರಿಗೆ ಕೃತಜ್ಞಳಾಗಿದ್ದೇನೆ. ಚುನಾವಣೋತ್ತರ ಸಮೀಕ್ಷೆಗಳು ಏನೇ ಇರಲಿ, ಜನರು ನಮಗೆ ಮತ ನೀಡಿದ್ದಾರೆ ಎಂದು ಸಂತೋಷದ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ, ನಾವು ಕಲಿಯುತ್ತೇವೆ: ರಾಹುಲ್ ಗಾಂಧಿ
Advertisement
ಮನೋಹರ್ ಪರಿಕ್ಕರ್ ಅವರು ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗಲೇ ಅನಾರೋಗ್ಯದ ಕಾರಣದಿಂದ 2019ರಲ್ಲಿ ನಿಧನರಾಗಿದ್ದರು. ಅದಾದ ಬಳಿಕ ಪ್ರಮೋದ್ ಸಾವಂತ್ ಮುಖ್ಯಮಂತ್ರಿ ಸ್ಥಾನಕ್ಕೇರಿದರು. 2012ರಲ್ಲಿ ಮೊದಲ ಬಾರಿಗೆ ಬಿಜೆಪಿ ಗೋವಾದಲ್ಲಿ ಬಹುಮತ ಪಡೆದುಕೊಂಡಿತ್ತು.