ಬೆಂಗಳೂರು: ರಾಜ್ಯದ ವಿದ್ಯಮಾನವನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ನಿರಂತರ ಹಗಲುಗನಸು ಎಂದು ಸಿಎಂ ಟ್ವಿಟ್ಟರಿನಲ್ಲಿ ಟ್ವೀಟ್ ಮಾಡಿದ್ದಾರೆ.
ಅಮೇರಿಕದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ. ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ನಿರಂತರ ಹಗಲುಗನಸು ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ಧ ಸಿಎಂ ಆಕ್ರೋಶ ಹೊರ ಹಾಕಿದ್ದಾರೆ.
Advertisement
ಅಮೇರಿಕದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ.
ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ #BJP ಯ ಪ್ರಯತ್ನ 'ನಿರಂತರ ಹಗಲುಗನಸು'
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 1, 2019
Advertisement
ಈ ಬಗ್ಗೆ ರಾಜಭವನದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ್ ಸಿಂಗ್, ನಾನು ಈಗಾಗಲೇ ಸ್ಪೀಕರ್ ಅವರಿಗೆ ರಾಜೀನಾಮೆಯನ್ನು ನೀಡಿದ್ದು, ಬೇಕಾದರೆ ಮತ್ತೊಮ್ಮೆ ರಾಜೀನಾಮೆ ನೀಡುತ್ತೇನೆ ಎಂದರು. ಈ ವೇಳೆ ತಮ್ಮ ರಾಜೀನಾಮೆ ನಿರ್ಧಾರದ ಕಾರಣವನ್ನು ತಿಳಿಸಲು ಇಚ್ಛಿಸದ ಅವರು, ನಾನು ಸದ್ಯ ರಾಜ್ಯಪಾಲರ ಭೇಟಿಗೆ ಆಗಮಿಸಿದ್ದೇನೆ. ಅವರ ಭೇಟಿಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡುತ್ತೇನೆ ಎಂದರು.
Advertisement
Advertisement
ಸಿಎಂ ನ್ಯೂಜೆರ್ಸಿಯಲ್ಲಿ ಇರುವ ಸಾಮರ್ಸೇಟ್‍ನಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ನಿರ್ಮಿಸಲಾಗುತ್ತಿರುವ ಶ್ರೀ ಕಾಲಭೈರವೇಶ್ವರ ದೇವಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಗುಜರಾತಿನ ಶ್ರೀ ಅರ್ಷ ವಿದ್ಯಾಮಂದಿರದ ಶ್ರೀ ಪರಮಾತ್ಮಾನಂದ ಸ್ವಾಮೀಜಿ ಹಾಗೂ ಮೈಸೂರಿನ ಶ್ರೀ ಸಚ್ಚಿದಾನಂದ ಗಣಪತಿ ಸ್ವಾಮೀಜಿ ಉಪಸ್ಥಿತರಿದ್ದರು.