Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಅನ್ನೋ ಪ್ರಧಾನಿ ಹೇಳಿಕೆಗೆ ಸಿಎಂ ತಿರುಗೇಟು

Public TV
Last updated: August 2, 2023 5:28 pm
Public TV
Share
3 Min Read
siddaramaiah
SHARE

ನವದೆಹಲಿ: ಕರ್ನಾಟಕದ ಗ್ಯಾರಂಟಿ ಯೋಜನೆಗಳಿಂದಾಗಿ (Guarantee Scheme) ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ಧಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಧನ್ಯವಾದಗಳು. ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಅಥವಾ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮೋದಿಗೆ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಹೇಳಿಕೆ ಸಂಬಂಧ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ (BJP) ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ. ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿ ಬಿಡಿ ಎಂದರು. ಇದನ್ನೂ ಓದಿ: ಅನಧಿಕೃತ ಫ್ಲೆಕ್ಸ್‌ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ

Narendra Modi 5

ಇಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆ ಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (B.S.Yediyurappa) ಗುಡುಗುತ್ತಲೇ ಇದ್ದಾರೆ ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ- ಕಾಂಗ್ರೆಸ್ ಪಕ್ಷ ವಂಚಕರ ಸಂತೆ: ಛಲವಾದಿ ನಾರಾಯಣಸ್ವಾಮಿ

ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನಿ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಕರ್ನಾಟಕದ ಬಿಜೆಪಿ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ? ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1,000 ರೂ. ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3,000 ರೂ.ಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ ಎಂದು ಕೇಳಿದರು. ಇದನ್ನೂ ಓದಿ: ಮಣಿಪುರದಲ್ಲಿ ಪರಿಸ್ಥಿತಿ ಕಠಿಣವಾಗಿದೆ, ತುರ್ತಾಗಿ ಮಧ್ಯಸ್ಥಿಕೆ ವಹಿಸಿ: ರಾಷ್ಟ್ರಪತಿಗೆ INDIA ಒಕ್ಕೂಟ ನಾಯಕರ ಮನವಿ

ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ? ಎಂದರು. ಇದನ್ನೂ ಓದಿ: ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್‌ಗೆ ಕಳಿಸೋಣ: ಶಿವಕುಮಾರ್

ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರ್ಕಾರ ಅಂದಾಜು 1.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ? ಡಬಲ್ ಎಂಜಿನ್ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆಯವರಿಗೆ ಮಾನಸಿಕ ಹಿಂಸೆ ನೀಡಲಾಗ್ತಿದೆ: ಜೈನಮುನಿ ಗುಣದರನಂದಿ ಶ್ರೀ

ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಅರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ ಎಂದರು. ಇದನ್ನೂ ಓದಿ: ರಕ್ಷಾ ಬಂಧನವನ್ನು ಮುಸ್ಲಿಂ ಮಹಿಳೆಯರೊಂದಿಗೂ ಆಚರಿಸಿ: ಬಿಜೆಪಿ ನಾಯಕರಿಗೆ ಮೋದಿ ಕರೆ

Web Stories

ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ


follow icon

TAGGED:bjpcongressGUARANTEE SCHEMEnarendra modiNew Delhisiddaramaihಕಾಂಗ್ರೆಸ್ಗ್ಯಾರಂಟಿ ಯೋಜನೆನರೇಂದ್ರ ಮೋದಿನವದೆಹಲಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

mysuru dasara jamboo savari 11
Bengaluru City

Mysuru Dasara | ಸೆ.22ರಿಂದ 11 ದಿನಗಳ ಕಾಲ ವಿಜೃಂಭಣೆಯ ದಸರಾ

Public TV
By Public TV
4 minutes ago
Bengaluru Dog Murder
Bengaluru City

ತಾನೇ ಸಾಕಿದ್ದ ಶ್ವಾನಕ್ಕೆ ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಹತ್ಯೆಗೈದ ಮಹಿಳೆ

Public TV
By Public TV
25 minutes ago
Tirupati Train
Bengaluru City

ತಿರುಪತಿಗೆ ತೆರಳೋ ಭಕ್ತಾದಿಗಳಿಗೆ ಗುಡ್ ನ್ಯೂಸ್ – ನೂತನ ರೈಲು ಸೇವೆ ಆರಂಭ

Public TV
By Public TV
32 minutes ago
CRIME
Bengaluru City

ಮದ್ವೆ ಆದ್ಮೇಲೆ ಗಂಡನ ಜೊತೆ ಹೇಗಿರಬೇಕು ಅಂತ ಹೇಳ್ಕೊಡ್ತೀನಿ – ತಾಯಿಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ!

Public TV
By Public TV
32 minutes ago
Yatnal
Latest

ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

Public TV
By Public TV
40 minutes ago
PM Modi 4
Latest

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

Public TV
By Public TV
47 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ
Welcome Back!

Sign in to your account

Username or Email Address
Password

Lost your password?