ಬೆಂಗಳೂರು: ಕಬ್ಬು ಬೆಳೆಯ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳು ಜೂನ್ 30 ರೊಳಗೆ ರೈತರಿಗೆ ಹಣ ಸಂದಾಯ ಮಾಡಬೇಕು. ಇಲ್ಲದೇ ಇದ್ದರೆ ಆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡು ಮಾರಾಟ ಮಾಡಿ ರೈತರಿಗೆ ಹಣ ನೀಡಬೇಕು ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ, ಕಬ್ಬು ಬಾಕಿ ವಸೂಲಿ ಹೊಣೆಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಒಂದು ವೇಳೆ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಹಣ ಕೊಡಿಸಲು ವಿಫಲರಾದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ ಆಗುತ್ತಾರೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.
Advertisement
Advertisement
ಇಂದಿನ ಸಭೆಯಲ್ಲಿ ಸಿಎಂ, ಜಿಲ್ಲಾಧಿಕಾರಿಗಳಿಕೆ ಖಡಕ್ ಸೂಚನೆ ನೀಡಿದರು. ಆದರೆ ಕಳೆದ ವರ್ಷದ ಕಬ್ಬಿನ ಬಾಕಿ ಹಣದ ಬಗ್ಗೆ ಸಭೆಯಲ್ಲಿ ಚರ್ಚೆಯೇ ನಡೆದಿಲ್ಲ. ಅಂದ ಹಾಗೇ, ಈ ವರ್ಷದ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಮೊತ್ತ 1,101 ಕೋಟಿ ರೂ. ರಷ್ಟಿದೆ.
Advertisement
ಸಭೆಯಲ್ಲಿ ಡಿಸಿಎಂ ಪರಮೇಶ್ವರ್, ಕಂದಾಯ ಸಚಿವ ಆರ್.ವಿ ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಸರ್ಕಾರದ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಜರಿದ್ದರು.