ಮೈಸೂರು: ಬಿಜೆಪಿ ಶಾಸಕರ ಮನೆಯಲ್ಲಿ 8 ಕೋಟಿ ರೂ. ಹಣ ಸಿಕ್ಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ (R. Dhruvanarayan) ಒತ್ತಾಯಿಸಿದರು.
ಲೋಕಾಯುಕ್ತ ಮುಚ್ಚಿದ ಕಾಂಗ್ರೆಸ್‌ಗೆ (Congress) ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂಬ ಬಿಜೆಪಿ (BJP) ನಾಯಕರ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕನ ಮನೆಯಲ್ಲಿ 8 ಕೋಟಿ ರೂ. ಹಣ ಸಿಕ್ಕಿದೆ. ಇದಕ್ಕಿಂತ ಹೆಚ್ಚಿನ ಪುರಾವೆ ಬೇಕಾಗಿಲ್ಲ. ನೈತಿಕತೆ ಏನಾದರೂ ಇದ್ದರೆ ಕೂಡಲೇ ಸಿಎಂ ರಾಜೀನಾಮೆ ಕೊಡಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಅಸ್ಪತ್ರೆಯಿಂದ ಡಿಸ್ಚಾರ್ಜ್
ಮುಖ್ಯಮಂತ್ರಿಗಳಿಗೆ ಮಾಹಿತಿ ಕೊರತೆಯಿದೆ. ಅಥವಾ ಅವರು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಲೋಕಾಯುಕ್ತದ ಅಧಿಕಾರ ಮೊಟಕುಗೊಳಿಸಲಿಲ್ಲ ಎಂದು ತಿಳಿಸಿದರು.
ಬಿಜೆಪಿ ಶಾಸಕನ ರಕ್ಷಣೆಗೆ ಸಿಎಂ ಮುಂದಾಗಿದ್ದಾರೆ. ರಾಜ್ಯದಲ್ಲಿ ಇಂಟಲಿಜೆನ್ಸ್ ಇದೆ. ಆದರೂ ಸಿಎಂ ಈ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಹೆಬ್ಬಾಳ್ಕರ್, ಡಿಕೆಶಿ ಎಲ್ಲರೂ ಒಟ್ಟಾಗಿಯೇ ಪಕ್ಷದ ಕೆಲಸ ಮಾಡ್ತಿದ್ವಿ: ರಮೇಶ್ ಜಾರಕಿಹೊಳಿ