ಬೆಂಗಳೂರು: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮೊದಲು ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟ್ಟರ್ ನಲ್ಲಿ ಟಾಂಗ್ ನೀಡಿದ್ದಾರೆ.
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕುರಿತು ತಮ್ಮ ಟ್ವೀಟ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲು ಉತ್ತರ ಪ್ರದೇಶದ ಜಂಗಲ್ ರಾಜ್ ಸರಿಮಾಡಲಿ, ಆಸ್ಪತ್ರೆಯಲ್ಲಿ ಸಾಯುತ್ತಿರುವ ಮಕ್ಕಳನ್ನು ಉಳಿಸಲಿ. ಆ ಮೇಲೆ ನಮಗೆ ಬುದ್ಧಿ ಹೇಳಲಿ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಸಿಎಂ, ಸೋಲಿನ ಭಯದಲ್ಲಿ ಬಿಜೆಪಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದೆ. ನಾಡಿನ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಧಾರ್ಮಿಕನಾಗುವುದೆಂದರೆ ನಮ್ಮ ಧರ್ಮ ಪಾಲನೆ ಮಾಡುವುದು, ಕೋಮುವಾದಿಯಾಗುವುದೆಂದರೆ ಧರ್ಮವನ್ನು ದ್ವೇಷಿಸುವುದು. ನಾವು ಧಾರ್ಮಿಕರಾಗಬೇಕು, ಕೋಮುವಾದಿಗಳಾಗಬಾರದು ಎಂದು ಟ್ವೀಟ್ ಮಾಡಿದ್ದಾರೆ.
Advertisement
ಯೋಗಿ ಅವರನ್ನು ರಾಜ್ಯಕ್ಕೆ ಸ್ವಾಗತಿಸುತ್ತೇವೆ. ಅವರು ಇಂದಿರಾ ಕ್ಯಾಂಟಿನ್ ಹಾಗೂ ನ್ಯಾಯಾಬೆಲೆ ಅಂಗಡಿಗಳಿಗೆ ಭೇಟಿ ನೀಡಿದರೆ, ನಿಮ್ಮ ರಾಜ್ಯದಲ್ಲಿ ಹಸಿವಿನಿಂದ ಉಂಟಾಗುತ್ತಿರುವ ಸಾವಿನ ಬಗ್ಗೆ ವರದಿ ತಯಾರಿಸಲು ಸಹಾಯವಾಗುತ್ತದೆ ಎಂದು ಮತ್ತೊಂದು ಟ್ವೀಟ್‍ನಲ್ಲಿ ವ್ಯಂಗ್ಯ ಮಾಡಿದ್ದಾರೆ.
Advertisement
ಬಿಎಸ್‍ವೈ ಟ್ವೀಟ್: ಯೋಗಿ ಆದಿತ್ಯನಾಥ್ ರವರು ಬೆಂಗಳೂರಿಗೆ ಬಂದಿದ್ದೇ ತಡ, ಹಿಂದೂ ದ್ವೇಷ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರ್ಮಿಕತೆಯ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ. ಇನ್ನೆರಡು ಬಾರಿ ಯೋಗಿ ಕರ್ನಾಟಕಕ್ಕೆ ಬಂದರೆ ಸಿದ್ದರಾಮಯ್ಯ ಅವರು ನವರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರೂ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹಿಂದೂ ವ್ಯಾಖ್ಯಾನ ವಿವರಿಸಿ ಸಿಎಂಗೆ ಟಾಂಗ್ ಕೊಟ್ಟ ಯುಪಿ ಸಿಎಂ
ಬೆಂಗಳೂರಿನ ಗೋವಿಂದರಾಜನಗರದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಸಿಎಂ ಯೋಗಿ ಅಧಿತ್ಯನಾಥ್ ಅವರು, ನಾನೂ ಕೂಡ ಹಿಂದೂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿ ಹಿಂದೂ ವ್ಯಾಖ್ಯಾನವನ್ನು ಮಾಡಿ ಸವಾಲು ಹಾಕಿದ್ದರು. ಹಿಂದೂ ಎನ್ನುವವರು ಗೋಹತ್ಯೆ ನಿಷೇಧ ಮಾಡಲಿ, ಹಿಂದೂ ಪದ್ಧತಿಯಲ್ಲಿ ಗೋಮಾಂಸ ತಿನ್ನಲ್ಲ, ಹಿಂದೂ ವ್ಯಾಖ್ಯಾನ ಗೊತ್ತಾ ಅಂತಾ ಖಾರವಾಗಿ ಪ್ರಶ್ನಿಸಿದ್ದರು. ಅಲ್ಲದೇ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿಕಾರಿದ್ದರು.