ಬೆಂಗಳೂರು ಮರಣ ಮಳೆ; ಮೃತ ಮಹಿಳೆ ಕುಟುಂಬಕ್ಕೆ 5 ಲಕ್ಷ ಪರಿಹಾರ – ಸಿಎಂ

Public TV
1 Min Read
siddaramaiah bengaluru rain

ಬೆಂಗಳೂರು: ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದು ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡ್ತೀವಿ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ರೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದ್ರು ಅಂತ ವೈದ್ಯರು ಹೇಳ್ತಿದ್ದಾರೆ. ಏನೇ ಆಗಿದ್ರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಇನ್ಫೋಸಿಸ್‌ ಉದ್ಯೋಗಿಯಾಗಿದ್ದ ಭಾನುರೇಖಾ ಎಂಬ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಮೃತಪಟ್ಟಿದ್ದರು.

Share This Article