ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಸಿಎಂ ಘೋಷಣೆ

Public TV
1 Min Read
siddaramaiah

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಮತ್ತು ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದರು.

ನಗರದಲ್ಲಿ ಕನ್ನಡ ರಾಜ್ಯೋತ್ಸವ (Kannada Rajyotsava) ಸಮಾರಂಭದಲ್ಲಿ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರಿ ಶಾಲೆಗಳಿಗೆ ಉಚಿತ ಘೋಷಣೆಯ ಉಡುಗೊರೆ ನೀಡಿದರು. ಇದನ್ನೂ ಓದಿ: Operation Leopard: ರಣತಂತ್ರ ರೂಪಿಸಿ ಕೊನೆಗೂ ಬೊಮ್ಮನಹಳ್ಳಿ ಚಿರತೆ ಸೆರೆ

kannada rajyostava

ಉಚಿತ ವಿದ್ಯುತ್, ಕುಡಿಯುವ ನೀರು ಬೇಕು ಎಂದು ಶಿಕ್ಷಣ ಇಲಾಖೆ ಬೇಡಿಕೆ ಇಟ್ಟಿತ್ತು. ಇಂದಿನಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್‌, ಕುಡಿಯುವ ನೀರನ್ನು ಉಚಿತವಾಗಿ ನೀಡಲಾಗುವುದು ಎಂದು ವೇದಿಕೆಯಲ್ಲೇ ಸಿಎಂ ಘೋಷಿಸಿದರು.

ಇತ್ತೀಚೆಗೆ ಕನ್ನಡ ಮಾಧ್ಯಮಗಳಲ್ಲಿ ಕಲಿಯುವ ಪ್ರೀತಿ ಕಡಿಮೆ ಆಗುತ್ತಿದೆ. ಇಂಗ್ಲಿಷ್ ಮಾಧ್ಯಮಗಳ ಮೇಲಿನ ವ್ಯಾಮೋಹ ಜಾಸ್ತಿ ಆಗುತ್ತಿದೆ. ಕನ್ನಡ ಶಾಲೆಯಲ್ಲಿ ಓದಿದರೆ ಕೆಲಸ ಸಿಗುವುದಿಲ್ಲ ಎನ್ನುವ ಕಲ್ಪನೆ ಇದೆ. ಈ ಕಲ್ಪನೆ ಬಿಡಬೇಕು. ಕನ್ನಡ ಮಾಧ್ಯಮಗಳಲ್ಲಿ ಕಲಿಯುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಆಧುನಿಕ ಉದ್ಯಮದ ತೊಟ್ಟಿಲು – ರಾಜ್ಯೋತ್ಸವಕ್ಕೆ ಶುಭಕೋರಿದ ಮೋದಿ, ಸಿಎಂ

kannada rajyotsava

ನಮ್ಮ ‌ಪ್ರಯತ್ನಕ್ಕೆ ಕೋರ್ಟ್‌ಗಳು ಸಹಕಾರ ನೀಡುತ್ತಿಲ್ಲ. ತಮ್ಮ ಮಕ್ಕಳು ಯಾವ ಭಾಷೆಯಲ್ಲಿ ಕಲಿಯಬೇಕು ಅಂತ ಪೋಷಕರು ನಿರ್ಧಾರ ಮಾಡಬಹುದು ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದ ನಮ್ಮ ‌ಪ್ರಯತ್ನಕ್ಕೆ ಹಿನ್ನಡೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಕನಿಷ್ಠ SSLC ವರೆಗೆ ಕನ್ನಡ ಮಾಧ್ಯಮದಲ್ಲಿ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: BMTC ಸಾರಥಿಗಳ ಹಾರ್ಟ್ ಇನ್ ಡೇಂಜರ್- ಜಯದೇವ ವೈದ್ಯರ ವರದಿಯಲ್ಲಿ ಬಹಿರಂಗ

Web Stories

Share This Article