ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ (Siddaramaiah) ಅವರ ಗ್ಯಾರಂಟಿ ಎಂದು ಸಿಎಂ ವಿರುದ್ಧ ಬಿಜೆಪಿ (BJP) ಎಕ್ಸ್‌ನಲ್ಲಿ ಕಿಡಿಕಾರಿದೆ.
ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ @siddaramaiah ಅವರ ಗ್ಯಾರಂಟಿ.
ಶಾಲೆ – ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ.
ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ… https://t.co/L4vtHXNPF7
— BJP Karnataka (@BJP4Karnataka) December 22, 2023
ಶಾಲೆ ಹಾಗೂ ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಮುಖ್ಯಮಂತ್ರಿಗಳು ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ
ಪಿಎಫ್‍ಐ ಗೂಂಡಾಗಳು ಹಾಗೂ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‍ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟ್ವೀಟ್‍ನಲ್ಲಿ ಎಚ್ಚರಿಸಿದೆ.
ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಹಿಜಬ್ ನಿಷೇಧ ವಾಪಸ್ (Withdraw Hijab Ban) ಪಡೆಯುವುದಾಗಿ ಹೇಳಿದ್ದಾರೆ. ಈ ಬಗ್ಗೆ ಸೂಚನೆಯನ್ನು ನೀಡಲಾಗಿದೆ. ಉಡುಪು ಅವರವರ ಇಷ್ಟ, ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ನಾವು ಅಂತಹ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದರು. ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಎಕ್ಸ್‌ನಲ್ಲಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ಬಿಜೆಪಿಗರು ಜಮೀರ್ ವಿಮಾನದ ಬಗ್ಗೆ ಮಾತಾಡೋ ಬದಲು ಪ್ರಧಾನಿಗಳಿಂದ ಬರ ಪರಿಹಾರ ಕೊಡಿಸಲಿ: ರಾಮಲಿಂಗಾರೆಡ್ಡಿ