ನವದೆಹಲಿ: ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿ ಉಳಿದಿರುವ ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ (Mekedatu and Upper Bhadra projects) ಅನುಷ್ಠಾನದ ಕುರಿತು ಗಮನ ಹರಿಸಬೇಕು ಎಂದು ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಮನವಿ ಮಾಡಿದ್ದಾರೆ.
Met the Hon’ble Union Minister for Jal Shakti, Shri C.R. Paatil, in New Delhi today and submitted a request seeking timely approvals for Karnataka’s key irrigation proposals.
Emphasised the significance of the Mekedatu and Upper Bhadra projects for boosting agricultural… pic.twitter.com/buKugTDrEZ
— Siddaramaiah (@siddaramaiah) April 3, 2025
ದೆಹಲಿಯಲ್ಲಿ ಈ ಬಗ್ಗೆ ಮನವಿ ಮಾಡಿದ ಅವರು, ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ (Farmers) ಕಲ್ಯಾಣಕ್ಕೆ ನೆರವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಚರ್ಚೆ – ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ
- Advertisement
- Advertisement
ದೇಶದಲ್ಲೇ ರಾಜಸ್ಥಾನ ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಇದನ್ನೂ ಓದಿ: ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ? – ಡಿಕೆಶಿ
ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ. ಹೀಗಾಗಿ ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.