Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

Bengaluru City

ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?

Public TV
Last updated: July 6, 2025 12:29 pm
Public TV
Share
3 Min Read
Siddaramaiah mallikarjun kharge
SHARE

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ – ಪ್ರತಿ ಹೇಳಿಕೆಗಳ ಜಟಾಪಟಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ (AICC OBC Advisory Council) ಅಧ್ಯಕ್ಷರಾಗಿ ನೇಮಕ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.‌

ಇದರಿಂದ ʻ5 ವರ್ಷ ನಾನೇ ಸಿಎಂʼ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಸಿಎಂ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ ತೆರಳಲಿದ್ದಾರೆಯೇ ಎನ್ನುವ ಪ್ರಶ್ನೆಯೂ ಮೂಡಿದೆ. ಇದನ್ನೂ ಓದಿ: ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

Siddaramaiah 3

ಸದ್ಯ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿದ್ದರಾಮಯ್ಯರನ್ನ ನೇಮಕ ಮಾಡಲಾಗಿದೆ. ಮಂಡಳಿಯ ಚಟುವಟಿಕೆಗಳನ್ನು ಕರ್ನಾಟಕದಿಂದಲೇ ಆರಂಭಿಸಲು ಎಐಸಿಸಿ ನಿರ್ಧರಿಸಿದ್ದು, ಇದೇ ಜುಲೈ 15ರಂದು ಬೆಂಗಳೂರಿನಲ್ಲಿ ಮೊದಲ ಸಭೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ (KPCC) ಕಚೇರಿ ಆವರಣದಲ್ಲಿನ ಭಾರತ್ ಜೋಡೊ ಭವನದಲ್ಲಿ ಮಂಡಳಿಯ ಮೊದಲ ಸಭೆ ನಡೆಯಲಿದೆ. ಮಂಡಳಿಯ ಸದಸ್ಯರು, ಸಂಚಾಲಕರು, ಕಾರ್ಯದರ್ಶಿಗಳು, ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಮುಖ ನಾಯಕರು ಸೇರಿದಂತೆ ದೇಶದ ವಿವಿಧ ರಾಜ್ಯಗಳ 90 ನಾಯಕರಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಈ ಪೈಕಿ ಐವರು ಮಾಜಿ ಸಿಎಂಗಳು, 10 ಮಂದಿ ಕೇಂದ್ರದ ಮಾಜಿ ಸಚಿವರೂ ಸಹ ಪಾಲ್ಗೊಳ್ಳುವ ಸಾಧ್ಯತೆಯಿದೆ.

ದೇಶದಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಚರ್ಚಿಸಿ, ಪರಿಹಾರ ಒದಗಿಸುವ ದಿಕ್ಕಿನಲ್ಲಿ ಕಾರ್ಯತಂತ್ರ ರೂಪಿಸಲು ಈ ವೇದಿಕೆ ಸಿದ್ಧಪಡಿಸಲಾಗಿದೆ. ಇದನ್ನೂ ಓದಿ: ಗ್ಯಾರಂಟಿ ಬೇಡ ಅಂತ ಹೇಳಿ, ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ: ರಾಯರೆಡ್ಡಿ

Siddaramaiah BK Hariprasad 2

ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಈ ಸಲಹಾ ಮಂಡಳಿಯನ್ನು ಸಿದ್ದರಾಮಯ್ಯ ಅವರು ಮುನ್ನಡೆಸಲಿದ್ದಾರೆ. ಸಲಹಾ ಮಂಡಳಿ ರಚನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅನುಮೋದನೆ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ ನಾಯಕರ ಪೈಕಿ ಸಿದ್ದರಾಮಯ್ಯ ಅವರೊಂದಿಗೆ ಬಿ.ಕೆ ಹರಿಪ್ರಸಾದ್ ಹಾಗೂ ಮಾಜಿ ಸಿಎಂ ಎಂ.ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಬಳಸಿಕೊಂಡು ದೇಶದಾದ್ಯಂತ ಹಿಂದುಳಿದ ವರ್ಗಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್‌ ಈ ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

VEERAPPA MOILY 1

ಎಐಸಿಸಿಯ ಹಿಂದುಳಿದ ವರ್ಗಗಳ ಘಟಕಕ್ಕೆ ಮುಂದಿನ ಕಾರ್ಯಯೋಜನೆಗಳು, ಅವುಗಳ ಅನುಷ್ಠಾನ, ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೆತ್ತಿಕೊಳ್ಳಬೇಕಾದ ವಿಷಯಗಳ ಕುರಿತು ಈ ಸಲಹಾ ಮಂಡಳಿಯು ಹಲವು ಸಲಹೆಗಳನ್ನು ನೀಡಲಿದೆ. ದೇಶದಾದ್ಯಂತ ಹಿಂದುಳಿದ ವರ್ಗಗಳ ಸಮಸ್ಯೆ, ಸವಾಲುಗಳನ್ನು ಅರಿತು ಸಲಹೆ ನೀಡುವುದರ ಜೊತೆಗೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಮಂಡಳಿ ಸಲಹೆಗಳನ್ನು ನೀಡಲಿದೆ. ಇದನ್ನೂ ಓದಿ: ಅಮೆರಿಕ ಪಾರ್ಟಿ; ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್‌ ಮಸ್ಕ್‌

ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯಲ್ಲಿ ಯಾರೆಲ್ಲ ಇರಲಿದ್ದಾರೆ?
ಸಿದ್ದರಾಮಯ್ಯ (ಅಧ್ಯಕ್ಷರು), ಬಿ.ಕೆ. ಹರಿಪ್ರಸಾದ್, ಅಶೋಕ್ ಗೆಹ್ಲೋಟ್‌, ಭೂಪೇಶ್ ಬಘೇಲ್, ವಿ.ನಾರಾಯಣಸ್ವಾಮಿ, ಸಚಿನ್ ಪೈಲಟ್, ಗುರುದೀಪ್ ಸಿಂಗ್ ಸಪ್ಪಲ್, ಅರುಣ್ ಯಾದವ್, ವಿಜಯ್ ನಾಮ್‌ದೇವ್‌ರಾವ್ ವಡೆಟ್ಟಿವಾರ್, ವಿ. ಹನುಮಂತರಾವ್, ಅಮಿತ್ ಚಾವ್ಡಾ, ಬಿ. ಮಹೇಶ್ ಕುಮಾರ್ ಗೌಡ, ಪೊನ್ನಮ್ ಪ್ರಭಾಕ, ಡಾ. ವೀರಪ್ಪ ಮೊಯಿಲಿ, ಎಸ್. ಜೋತಿಮಣಿ (ಸಂಸದೆ), ಶ್ರೀಕಾಂತ್ ಜೇನಾ, ಕಮಲೇಶ್ವರ್ ಪಟೇಲ್, ಅಜಯ್ ಕುಮಾರ್ ಲಲ್ಲು, ಸುಭಾಷಿಣಿ ಯಾದವ್, ಅಡೂರು ಪ್ರಕಾಶ್ (ಸಂಸದ), ಧನೇಂದ್ರ ಸಾಹು, ಹೀನಾ ಕಾವ್ರೆ, ಡಾ. ಅನಿಲ್ ಜೈಹಿಂದ್- ಸಲಹಾ ಮಂಡಳಿಯ ಸಂಚಾಲಕರು, ಜಿತೇಂದರ್ ಬಘೇಲ್- ಸಲಹಾ ಮಂಡಳಿಯ ಕಾರ್ಯದರ್ಶಿ.

TAGGED:aicccongressmallikarjun khargeOBC Advisory Councilsiddaramaiahಎಐಸಿಸಿಒಬಿಸಿ ಸಲಹಾ ಮಂಡಳಿಕಾಂಗ್ರೆಸ್ಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
25 minutes ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
26 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
47 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
1 hour ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
2 hours ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?