Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೈಯಕ್ತಿಕ ಕೆಲಸಗಳಿಗಾಗಿ ವಸಂತ ಬಂಗೇರ ಯಾವತ್ತೂ ನನ್ನ ಬಳಿ ಬಂದಿಲ್ಲ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೈಯಕ್ತಿಕ ಕೆಲಸಗಳಿಗಾಗಿ ವಸಂತ ಬಂಗೇರ ಯಾವತ್ತೂ ನನ್ನ ಬಳಿ ಬಂದಿಲ್ಲ: ಸಿಎಂ

Bengaluru City

ವೈಯಕ್ತಿಕ ಕೆಲಸಗಳಿಗಾಗಿ ವಸಂತ ಬಂಗೇರ ಯಾವತ್ತೂ ನನ್ನ ಬಳಿ ಬಂದಿಲ್ಲ: ಸಿಎಂ

Public TV
Last updated: May 21, 2024 4:13 pm
Public TV
Share
3 Min Read
VASANTHA BANGERA
SHARE

– ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ
– ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ ಹೆಸರಿಡಲು ಸರ್ಕಾರ ಸಿದ್ಧ

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ, ಕೈ ನಾಯಕ ವಸಂತ ಬಂಗೇರ (Vasantha Bangera) ಅವರು ವೈಯಕ್ತಿಕ ಕೆಲಸಗಳಿಗಾಗಿ ಯಾವತ್ತೂ ನನ್ನ ಬಳಿ ಬಂದಿಲ್ಲ. ಇದೀಗ ಒಬ್ಬ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಅಲ್ಲದೆ ಬೆಳ್ತಂಗಡಿ ಬಸ್‌ ತಂಗುದಾಣಕ್ಕೆ ವಸಂತ ಬಂಗೇರ ಹೆಸರಿಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಹಿರಿಯ ನಾಯಕರು, ಆತ್ಮೀಯರು ಆದ ವಸಂತ ಬಂಗೇರ ಅವರ ಉತ್ತರಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.

ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು.
ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ… pic.twitter.com/ujrplmu6ca

— Siddaramaiah (@siddaramaiah) May 21, 2024

ಇತ್ತೀಚೆಗೆ ನಿಧನಹೊಂದಿದ್ದ ವಸಂತ ಬಂಗೇರ ಅವರ ಉತ್ತರಕ್ರಿಯೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆಯಿತು. ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಸರಣಿ ಎಕ್ಸ್‌ ಮಾಡಿರುವ ಸಿಎಂ, ಹಿರಿಯ ನಾಯಕರು, ಆತ್ಮೀಯರು ಆದ ವಸಂತ ಬಂಗೇರ ಅವರ ಉತ್ತರಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ ಎಂದಿದ್ದಾರೆ.

ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದು ಬರೆದುಕೊಂಡಿದ್ದಾರೆ.

ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವಮಾನವ ಮೌಲ್ಯವನ್ನು ಪಾಲಿಸಿದರು. ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು.… pic.twitter.com/9vOrJaunW4

— Siddaramaiah (@siddaramaiah) May 21, 2024

ಮಾದರಿ ರಾಜಕೀಯ ನಾಯಕ: ಸತ್ಯ, ಬಡವರ ಪರ ಕಾಳಜಿ, ರಾಜಿರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ. ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವಮಾನವ ಮೌಲ್ಯವನ್ನು ಪಾಲಿಸಿದರು. ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಬಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು ಎಂದು ಹೇಳಿದ್ದಾರೆ.

ವಸಂತ ಬಂಗೇರ ಅವರು ಮರೆಯಾದರೂ ಅವರು ತಮ್ಮ ಕೆಲಸ ಕಾರ್ಯಗಳ ಮೂಲಕ ಜನಮಾನಸದಲ್ಲಿದ್ದಾರೆ. ಸದಾಕಾಲ ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿ, ಜನರ ಹಿತದ ಬಗ್ಗೆಯೇ ಯೋಚಿಸುತ್ತಿದ್ದ ಬಂಗೇರ ಅವರದು ಅಪರೂಪದ ವ್ಯಕ್ತಿತ್ವ.
ನಿಸ್ವಾರ್ಥ ನಾಯಕ ಬಂಗೇರ ಅವರ ನೆನಪಿಗಾಗಿ ಬೆಳ್ತಂಗಡಿ ಬಸ್ಟಾಂಡ್ ಗೆ ಅವರ ಹೆಸರಿಡಲು ಸರ್ಕಾರ ಸಿದ್ಧವಿದೆ. ಜೊತೆಗೆ ಸರ್ಕಲ್‌ನಲ್ಲಿ… pic.twitter.com/omai8FOdcg

— Siddaramaiah (@siddaramaiah) May 21, 2024

ಪ್ರೀತಿಯ ಸ್ನೇಹಿತನ ಕಳಕೊಂಡ ದುಃಖ: 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು. ಅವರು ಇಂದು ನಮ್ಮೊಂದಿಗಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿ. ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಬಡವಾಗಿದೆ. ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿದ್ದಾರೆ, ಒಬ್ಬ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡ ದುಃಖ ನನ್ನದು ಎಂದು ಸಿಎಂ ತಿಳಿಸಿದ್ದಾರೆ.

ಬಸ್‌ ನಿಲ್ದಾಣಕ್ಕೆ ಹೆಸರು: ವಸಂತ ಬಂಗೇರ ಅವರು ಮರೆಯಾದರೂ ಅವರು ತಮ್ಮ ಕೆಲಸ ಕಾರ್ಯಗಳ ಮೂಲಕ ಜನಮಾನಸದಲ್ಲಿದ್ದಾರೆ. ಸದಾಕಾಲ ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿ, ಜನರ ಹಿತದ ಬಗ್ಗೆಯೇ ಯೋಚಿಸುತ್ತಿದ್ದ ಬಂಗೇರ ಅವರದ್ದು ಅಪರೂಪದ ವ್ಯಕ್ತಿತ್ವ. ನಿಸ್ವಾರ್ಥ ನಾಯಕ ಬಂಗೇರ ಅವರ ನೆನಪಿಗಾಗಿ ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ ಅವರ ಹೆಸರಿಡಲು ಸರ್ಕಾರ ಸಿದ್ಧವಿದೆ. ಜೊತೆಗೆ ಸರ್ಕಲ್‌ನಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ನಾನು ಮುಕ್ತವಾಗಿದ್ದೇನೆ. ಇದು ಬಂಗೇರ ಅವರ ಜೀವನ ಸಾಧನೆಯನ್ನು ಗೌರವಿಸಲು ನನಗೆ ದೊರೆತ ಅವಕಾಶ ಎಂದು ಭಾವಿಸಿದ್ದೇನೆ ಎಂದು ಸಿಎಂ ಸರಣಿ ಟ್ವೀಟ್‌ನಲ್ಲಿ ಬರೆದುಕೊಂಟಿದ್ದಾರೆ.

Vasantha Bangera 1

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ (Vasanth Bangera) ಮೇ 8 ರಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಂಗೇರ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

TAGGED:congressMangalurusiddaramaiahVasantha Bangeraಕಾಂಗ್ರೆಸ್ಮಂಗಳೂರುವಸಂತ ಬಂಗೇರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raghav Chadha
Latest

ರಾಘವ್‌ ಚಡ್ಡಾಗೆ AAP ಶಾಕ್‌ – ರಾಜ್ಯಸಭೆಯಲ್ಲಿ ಉಪನಾಯಕ ಸ್ಥಾನದಿಂದ ವಜಾ

Public TV
By Public TV
1 minute ago
CRIME
Crime

ಮಗನ ರೋಗ ವಾಸಿಯಾಗಲು 12 ವರ್ಷದ ಮಗಳನ್ನೇ ಬಲಿಕೊಟ್ಟ ತಾಯಿ – ಬಳಿಕ ರೇಪ್ ಅಂತ ದೂರು

Public TV
By Public TV
13 minutes ago
religious waste
Dakshina Kannada

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

Public TV
By Public TV
44 minutes ago
lovers suicide chamarajanagara
Chamarajanagar

ನೇಣು ಬಿಗಿದುಕೊಂಡು ಆದಿವಾಸಿ ಸಮುದಾಯದ ಪ್ರೇಮಿಗಳು ಆತ್ಮಹತ್ಯೆ

Public TV
By Public TV
1 hour ago
jain premier league goes big 12 teams auctioned for rs 31 crore
Cricket

ಜೈನ್ ಪ್ರೀಮಿಯರ್ ಲೀಗ್ – ಕೋಟಿ ಕೋಟಿಗೆ ಹರಾಜಾದ ತಂಡಗಳು

Public TV
By Public TV
1 hour ago
Rupee Value dollar down
Latest

12 ವರ್ಷಗಳ ಬಳಿಕ ಒಂದೇ ದಿನ ಡಾಲರ್‌ ಮುಂದೆ ಅತಿದೊಡ್ಡ ಏರಿಕೆ ದಾಖಲಿಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?