ಚಿತ್ರರಂಗದಲ್ಲಿ ಬಯೋಪಿಕ್ (Biopic) ಸಿನಿಮಾಗಳ ಹಾವಳಿ ಜಾಸ್ತಿಯಾಗಿದೆ. ಕ್ರಿಕೆಟ್, ಸಿನಿಮಾ, ಉದ್ಯಮ ಹೀಗೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನ ತೆರೆಯ ಮೇಲೆ ತೋರಿಸಲಾಗುತ್ತದೆ. ಇದೀಗ ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಯೋಪಿಕ್ ತೆರೆಗೆ ತರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತಾದ ಸಿನಿಮಾದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ಈಗಾಗಲೇ ಭರ್ಜರಿಯಾಗಿ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದೆಯಂತೆ. ಮೊದಲ ಭಾಗದಲ್ಲಿ ಅವರ ಬಾಲ್ಯ, ಶಾಲಾ ಕಾಲೇಜು ದಿನಗಳು ಮತ್ತು ಲಾಯರ್ ವೃತ್ತಿವರೆಗೂ ಕಥೆ ಇರಲಿದೆ. ಎರಡನೇ ಭಾಗದಲ್ಲಿ ಅವರ ರಾಜಕೀಯ ದಿನಗಳು ಮತ್ತು ಹೋರಾಟದ ಹಿನ್ನೆಲೆಯನ್ನು ಹೇಳಲು ಹೊರಟಿದೆಯಂತೆ ಚಿತ್ರತಂಡ.
ಸಿದ್ದರಾಮಯ್ಯ ಅವರ ಕುರಿತಾದ ಚಿತ್ರಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಕಲಾವಿದರ ಆಯ್ಕೆ ಕೂಡ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಬಾಲ್ಯ ಮತ್ತು ಯೌವನ ಹೀಗೆ ಎರಡು ಸ್ತರದ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇದೆ.
ರಾಜಕೀಯ (Politics) ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ (Sathyaratanam) ರೆಡಿಯಾಗಿದ್ದಾರೆ. ಇನ್ನೂ ವಿಶೇಷ ಅಂದ್ರೆ ಸಿದ್ದರಾಮಯ್ಯ ಅವರ ಪಾತ್ರಕ್ಕೆ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ(Vijay Sethupathi) ಬಣ್ಣ ಹಚ್ಚಲಿದ್ದಾರೆ ಎಂದು ಮೂಲಗಳ ಪ್ರಕಾರ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ:ರಾಜೀವ್ ಅಭಿನಯದ ‘ಉಸಿರೇ ಉಸಿರೇ ಚಿತ್ರದ ಫಸ್ಟ್ ಸಾಂಗ್ ರಿಲೀಸ್
ಕೊಪ್ಪಳದ ಮೂಲದ ನಿರ್ಮಾಪಕರಿಂದ ಚಿಂತನೆ ನಡೆಸಿದ್ದಾರೆ. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಸಚಿವರಾದ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹೈ ಬಜೆಟ್‌ನಲ್ಲಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಬಯೋಪಿಕ್ ಬಗ್ಗೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ಸಿಗಲಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]