ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಇರುವ ಮದ್ಯದಂಗಡಿಗಳನ್ನ ಶನಿವಾರ ಮುಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಇವತ್ತು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ.
ಲೋಕೋಪಯೋಗಿ ಇಲಾಖೆ, ಅಬಕಾರಿ ಇಲಾಖೆ, ಕಾನೂನು ಇಲಾಖೆಯ ಅಧಿಕಾರಿಗಳ ಸಭೆ ಕರೆದಿದ್ದು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ 3500 ಮದ್ಯದಂಗಡಿಗಳನ್ನ ಮುಚ್ಚಲಾಗಿದ್ದು, ಬೆಂಗಳೂರಲ್ಲೇ 850 ಮದ್ಯದಂಗಡಿಗಳನ್ನ ಬಂದ್ ಮಾಡಲಾಗಿದೆ.
ಸುಪ್ರೀಂ ಕೋರ್ಟ್ ಆದೇಶದನ್ವಯ ಮದ್ಯದಂಗಡಿಗಳನ್ನ ಮುಚ್ಚಿದ್ದು, ಹೆದ್ದಾರಿ ಡಿನೋಟಿಫೈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಹಾಗಾಗಿ ಮುಂದಿನ ನಿರ್ಧಾರಗಳ ಬಗ್ಗೆ ಇವತ್ತು ಸಿಎಂ ಸಭೆಯಲ್ಲಿ ಚರ್ಚೆ ನಡೆಯಲಿದೆ.