ಬೆಂಗಳೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು (Devaraj Urs) ಅವರ 108ನೇ ಜನ್ಮದಿನದ ಹಿನ್ನೆಲೆ ಅರಸು ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಮಾಲಾರ್ಪಣೆ ಮಾಡಿದ್ದಾರೆ. ಬಳಿಕ ಮಾಜಿ ಸಿಎಂ ಅವರ ನೆಚ್ಚಿನ ಬೆಂಝ್ ಕಾರಿನಲ್ಲಿ (Benz Car) ಸವಾರಿ ಮಾಡಿದ್ದಾರೆ.
ವಿಧಾನಸೌಧದ ಆವರಣದಲ್ಲಿರುವ ಅರಸು ಅವರ ಪ್ರತಿಮೆ ಬಳಿ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅರಸು ಅವರು ಬಳಸುತ್ತಿದ್ದ ಕಪ್ಪು ಬಣ್ಣದ ಬೆಂಝ್ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ರೌಂಡ್ಸ್ ಹೊಡೆದಿದ್ದಾರೆ.
ವಿಧಾನಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ದೇವರಾಜ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಚಿವ ಶಿವರಾಜ್ ತಂಗಡಗಿ, ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇರಿ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ ಆಗುತ್ತೆ – ಕೋಡಿಮಠ ಶ್ರೀಗಳ ಭವಿಷ್ಯ
ಈ ಸಾಲಿನ ದೇವರಾಜ ಅರಸು ಪ್ರಶಸ್ತಿಗೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಭಾಜನರಾಗಿದ್ದಾರೆ. ಇದನ್ನೂ ಓದಿ: WorldCup 2023: ಬಿಸಿಸಿಐಗೆ ಹೊಸ ತಲೆನೋವು – ವೇಳಾಪಟ್ಟಿ ಬದಲಾವಣೆಗೆ ಹೈದರಾಬಾದ್ ಅಧಿಕಾರಿಗಳಿಂದ ಮನವಿ
Web Stories