ಧಾರವಾಡ: ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಭೇಟಿಗೆ ಮುನ್ನ ಮಾಂಸಾಹಾರ ಸೇವನೆಯನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಧಾರವಾಡದಲ್ಲಿ ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವರು ಮಾಂಸ ಆಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಬರಬೇಡಿ ಎಂದು ಹೇಳಿಲ್ಲ ಎಂದರು. ಬೇಡರ ಕಣ್ಣಪ್ಪ ಕೂಡಾ ಶಿವನಿಗೆ ಜಿಂಕೆ ಮಾಂಸ ನೈವೇದ್ಯ ಮಾಡಿದ್ದ. ಮಾಂಸ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದು ತಪ್ಪಲ್ಲ ಎಂದರು.
Advertisement
Advertisement
ಯಾವ ದೇವರೂ ಮಾಂಸ ಆಹಾರ ಸೇವನೆ ಮಾಡಬೇಡಿ ಎಂದು ಹೇಳುತ್ತಾ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಪ್ರಶ್ನೆಗೆ ಸಿಡಿಮಿಡಿಗೊಂಡರು.
Advertisement
ಘಟನೆ ಏನಾಗಿತ್ತು?: ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ವೇಳೆ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ ಬಂಟ್ವಾಳದಲ್ಲಿ ಕಾರ್ಯಕ್ರಮ ಮುಗಿಸಿ, ಬಂಟ್ವಾಳ ಐಬಿಯಲ್ಲಿ ಕರಾವಳಿ ಖಾದ್ಯ ಮೀನಿನ ಊಟವನ್ನು ಸೇವಿಸಿದ್ದರು. ಆ ಬಳಿಕ ಸಿಎಂ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೋಗಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು.
Advertisement
ಸಿಎಂ ಸಿದ್ದರಾಮಯ್ಯ ಜೊತೆ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್ ಅವರು ಮಂಜುನಾಥನ ದರ್ಶನ ಪಡೆದಿದ್ದರು. ಪುಣ್ಯ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರು ಮಾಂಸಹಾರವನ್ನು ಸೇವಿಸದೇ ಮಂಜುನಾಥ ಸ್ವಾಮಿಯ ದರ್ಶನ ಪಡೆಯುತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯ ಮೀನು ಮಾಂಸ ಸೇವಿಸಿ ಮಂಜುನಾಥನ ದರ್ಶನ ಪಡೆದಿರುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು.