ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ರಾತ್ರಿ ಕಳೆಯುವ ಕಾರ್ಮಿಕರ ನೆರವಿಗೆ ಧಾವಿಸುವಂತೆ ಸಿಎಂ ಸೂಚನೆ

Public TV
1 Min Read
Siddaramaiah

320 X 50

ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತ ಹಿನ್ನೆಲೆಯಲ್ಲಿ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣ (Baiyappanahalli Railway Station) ದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ (BBMP Commissioner) ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿರುವ ಕಾರಣ ಆ ಮಾರ್ಗದಲ್ಲಿ ಸಂಚರಿಸುವ ಹತ್ತಾರು ರೈಲುಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಶಾನ್ಯ ರಾಜ್ಯಗಳು, ಕೋಲ್ಕತ್ತಾ ಮುಂತಾದ ಕಡೆಗಳಿಗೆ ತೆರಳಬೇಕಿರುವ ಕಾರ್ಮಿಕರು ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಅವರೆಲ್ಲರಿಗೂ ಊಟ, ತಿಂಡಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: 200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

ಇದಕ್ಕೆ ಪ್ರತಿಕ್ರಿಯಿಸಿಉರವ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಿಗೆ ತೆರಳಬೇಕಾಗಿದ್ದ ರೈಲುಗಳ ಪ್ರಯಾಣ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ & ಯಶವಂತಪುರ ಜಂಕ್ಷನ್ ಗಳಲ್ಲಿಯೇ ಪ್ರಯಾಣಿಕರು ಉಳಿದುಕೊಂಡಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳು ಮತ್ತು ಮಾನ್ಯ ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಬಿಬಿಎಂಪಿ ವತಿಯಿಂದ ಈ ಪ್ರಯಾಣಿಕರಿಗೆ ತಿಂಡಿ, ಊಟ, ವಸತಿ ಸೇರಿದಂತೆ ಚಿಕ್ಕ ಮಕ್ಕಳಿಗೆ ಬಿಸಿಹಾಲು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಮತ್ತು ಈ ಪ್ರಯಾಣಿಕರಿಗೆ ಅಗತ್ಯವಾದ ತುರ್ತು ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

Share This Article