ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ನಾಗಮೋಹನ ದಾಸ್ ಸಮಿತಿ ವರದಿಯನ್ನು ಒಪ್ಪಿದ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ರಂಭಾಪುರಿ ಶ್ರೀ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರಂಭಾಪುರಿ ಶ್ರೀಗಳು, ಮುಖ್ಯಮಂತ್ರಿಗಳು ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಲಿಂಗಾಯತ ವೀರಶೈವ ಧರ್ಮವನ್ನ ಛಿದ್ರ ಮಾಡಿದ್ದಾರೆ. ಇವರಿಗೆ ಜನರು ತಕ್ಕಪಾಠ ಕಲಿಸುತ್ತಾರೆ. ಅತ್ಯಂತ ಅವೈಜ್ಞಾನಿಕ ಹಾಗೂ ರಾಜಕೀಯ ಪ್ರೇರಿತರಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಿಡಿಕಾರಿದರು.
Advertisement
Advertisement
ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯೇಕ ಧರ್ಮ ಸ್ಥಾಪನೆ ಮಾಡುವ ವಿಚಾರದಲ್ಲಿ ಅತುರದ ನಿರ್ಧಾರ ಮಾಡಿದ್ದಾರೆ. ಕ್ಯಾಬಿನೆಟ್ ನಿರ್ಧಾರವನ್ನು ವೀರಶೈವ ಲಿಂಗಾಯತ ಧರ್ಮ ರಾಷ್ಟ್ರೀಯ ಮಠ ಪರಿಷತ್ ಖಂಡಿಸುತ್ತದೆ. ಅಲ್ಲದೇ ವೀರಶೈವ ಮಠಾಧೀಶರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ವೀರಶೈವದಿಂದ ಲಿಂಗಾಯತವನ್ನು ಯಾರು ಬೇರ್ಪಡಿಸಲು ಸಾಧ್ಯವಿಲ್ಲ. ಧರ್ಮವನ್ನು ಒಡೆಯುವ ಕೆಲಸ ಮಾಡಿದ ರಾಜಕಾರಣಿಗಳಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ರಾಜ್ಯದ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸುವುದಿಲ್ಲ ಎಂದು ಹೇಳಿದರು.
Advertisement
ಸಮಿತಿಯ ಮುಂದೆ ಈಗಾಗಲೇ ನಾವು ಸಾವಿರಾರು ಪುಟಗಳ ಮಾಹಿತಿ ನೀಡಿದ್ದೆವು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ಸಹ ವೀರಶೈವ ಹಾಗೂ ಲಿಂಗಾಯತ ಧರ್ಮದ ಎಲ್ಲರು ಒಟ್ಟಿಗೆ ಬಂದರೆ ಮಾತ್ರ ಶಿಫಾರಸು ಮಾಡುವ ಕುರಿತು ಹೇಳಿದ್ದರು. ಆದರೆ ಇಂದು ಅವರು ತಮ್ಮ ಮಾತನ್ನು ತಪ್ಪಿದ್ದಾರೆ. ಅವರ ಮಾತಿನ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಆರೋಪಿಸಿದರು.
Advertisement
ಸಮಿತಿಗೆ ಸಾವಿರಾರು ಪುಟ ವೀರಶೈವ ಇತಿಹಾಸದ ಕುರಿತು ಮಾಹಿತಿ ನೀಡಲಾಗಿದೆ. ಆದರೆ ಇಲ್ಲಿ ಏಕಪಕ್ಷೀಯ ನಿರ್ಧಾರ ಮಾಡಿ. ಸ್ವಾತಂತ್ರ್ಯ ಲಿಂಗಾಯತರು ನೀಡಿದ ಮಾಹಿತಿಯನ್ನೇ ಸಮಿತಿ ನೀಡಿದೆ ಎಂದರು.
ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ಮುಂದುವರೆಯುತ್ತದೆ. ವೀರಶೈವ ಮಠದ ರಾಷ್ಟ್ರೀಯ ಪರಿಷತ್ ಹಾಗೂ ವೀರಶೈವ ಮುಂಖಡರ ಸಮಾವೇಶ ಕರೆದು ಚರ್ಚೆ ನಡೆಸಲಾಗುತ್ತದೆ. ಅಲ್ಲದೇ ಈ ಕುರಿತು ಕೇಂದ್ರ ಸರ್ಕಾರಕ್ಕೂ ಮಾಹಿತಿ ಸಲ್ಲಿಸಲಾಗುತ್ತದೆ. ಕಾನೂನು ಹೋರಾಟಕ್ಕೂ ನಾವು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು. ಇದನ್ನು ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು