ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿ ಕಾಂಗ್ರೆಸ್ ನಾಯಕರಿಗೆ (Congress Leaders) ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ.
2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ (Protest) ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರೇಸ್ಕೋರ್ಸ್ ರಸ್ತೆಯಲ್ಲಿ ಪ್ರತಿಭಟಿಸಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು – 6 ಮಂದಿ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಕೆ
ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದೆ. ಸಿದ್ದರಾಮಯ್ಯನವರಿಗೆ ಮಾರ್ಚ್ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್ ಹಾಕಲಾಗುತ್ತದೆ.