ಬಾಗಲಕೋಟೆ: ರಾಜಕೀಯದಿಂದ ದೂರ ಉಳಿದಿರುವ ಮಾಜಿ ಸಚಿವ ಅಂಬರೀಶ್‍ರನ್ನು ಶನಿವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದರು. ಈ ಕುರಿತು ಪ್ರತಿಕಿಯಿಸಿರುವ ಸಿಎಂ ಸಿದ್ದರಾಮಯ್ಯ, ಪಾಪ ಭೇಟಿಯಾಗ್ಲಿ ಬಿಡಿ ಯಾರು ಬೇಡ ಅಂದೋರು ಅಂತಾ ಹೇಳಿದ್ದಾರೆ.
ಬಾದಾಮಿಯಲ್ಲಿ ಸುದ್ದಿಗಾರರಿಗೆ ಈ ಕುರಿತು ಗರಂ ಆದ ಸಿಎಂ, ಕುಮಾರಸ್ವಾಮಿ ಯಾವ ಕಾರಣಕ್ಕಾಗಿ ಭೇಟಿಯಾಗಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಯಾರನ್ನೋ ಭೇಟಿಯಾದ್ರೆ ನಾನೇನು ಹೇಳಲಿ. ಭೇಟಿಯಾಗಿದ್ದಾರೆ ಭೇಟಿಯಾಗಿದ್ದಾರೆ ಅಷ್ಟೇ ಮತ್ತೇನಿಲ್ಲ. ಯಾತಕ್ಕಾಗಿ ಭೇಟಿಯಾಗಿದ್ದಾರೆ ಏನ್ ಮಾತನಾಡಿಕೊಂಡಿದ್ದಾರೆ ಗೊತ್ತಿಲ್ಲ. ಬೇರೆ ಪಕ್ಷದವರನ್ನ ಭೇಟಿಯಾಗಬಾರದು ಅಂತ ಕಾನೂನು ಏನಾದ್ರು ಇದೆಯಾ ಅಂತಾ ಸಿಎಂ ಪ್ರಶ್ನಿಸಿದ್ರು. ಇದನ್ನೂ ಓದಿ: ಕಾಂಗ್ರೆಸ್ ನಿಂದ ದೂರ ಉಳಿದಿರೋ ಅಂಬರೀಶ್ ಜೆಡಿಎಸ್ ಸೇರ್ತಾರಾ?
ಶನಿವಾರ ರಾತ್ರಿ ಬೆಂಗಳೂರಿನ ಗಾಲ್ಫ್ ಕ್ಲಬ್‍ನಲ್ಲಿರುವ ಅಂಬಿ ಮನೆಗೆ ಕುಮಾರಸ್ವಾಮಿ ತೆರಳಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಮಂಡ್ಯದಲ್ಲಿ ನಮ್ಮ ಪಕ್ಷವನ್ನು ಬೆಂಬಲಿಸಿ ಅಂತ ಹೆಚ್ ಡಿಕೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಈ ವೇಳೆ ಅಂಬಿ ಕಾಂಗ್ರೆಸ್‍ನಲ್ಲಿ ನನಗೆ ಅವಮಾನ ಮಾಡಿದ್ದಾರೆ. ಹೇಳದೇ ಕೇಳದೇ ಸಚಿವ ಸ್ಥಾನದಿಂದ ತೆಗೆದುಹಾಕಿದ್ದಾರೆ. ಅದೇ ಕಾರಣಕ್ಕೆ ಚುನಾವಣೆಗೆ ನಿಲ್ಲುತ್ತಿಲ್ಲ ಅಂತ ತಮ್ಮ ನೋವು ತೋಡಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್ ಬಗ್ಗೆ ಅಂಬಿ ಹೊಗಳಿದ್ದರು. ಆದರೆ ಈಗ ಜೆಡಿಎಸ್ ಸೇರ್ಪಡೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೀನಿ ಎಂದು ಹೇಳಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಅಂಬರೀಶ್ ಅವ್ರ ಇಮೇಜ್ ಹಾಳಾಗಲು ಅವರ ಅಕ್ಕಪಕ್ಕದಲ್ಲಿದ್ದವರೇ ಕಾರಣ: ಕಾಂಗ್ರೆಸ್ ಮುಖಂಡ ಪರೋಕ್ಷ ವಾಗ್ದಾಳಿ
ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ, ವಯಸ್ಸು ಸಹಕರಿಸ್ತಿಲ್ಲ, ಹೋಗ್ ಹೋಗಿ ನಾನೆಲ್ಲೂ ಬರಕಿಲ್ಲ- ಅಂಬರೀಶ್
ಇದನ್ನೂ ಓದಿ: ಅಂಬರೀಶ್, ನಾನು ಅಣ್ಣ-ತಮ್ಮಂದಿರಿದ್ದಂತೆ: ಕುಮಾರಸ್ವಾಮಿ
ಇದನ್ನೂ ಓದಿ: ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್