ಮೈಸೂರು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರಿಗೆ ಕಾಂಗ್ರೆಸ್ ವಿಧಾನ ಪರಿಷತ್ ಟಿಕೆಟ್ ಸಿಗುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಿಂದ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ಈ ಸುಳಿವು ನೀಡಿದ್ದಾರೆ.
ಈ ಹೇಳಿಕೆಗೆ ಪೂರಕ ಎಂಬಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ನಮ್ಮ ಹೈಕಮಾಂಡ್‌ನವರು (Congress High Command) ನನ್ನ ಪುತ್ರ ಯತೀಂದ್ರ ಅವರನ್ನು ಎಂಲ್‌ಸಿ (MLC) ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು ಎಂದು ಬರೆದುಕೊಂಡಿದ್ದಾರೆ.
ನಮ್ಮ ಹೈಕಮಾಂಡ್‌ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. 2/4#ಮೈಸೂರು #ಮಾಧ್ಯಮಹೇಳಿಕೆ
— Siddaramaiah (@siddaramaiah) May 24, 2024
ಲೋಕಸಭೆ ಚುನಾವಣೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆ ಮಾಡುತ್ತೇವೆ ಎಂದು ತಿಳಿಸಿದರು.