– ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ಸಾಲ ವಿತರಣೆ ಗುರಿ
ಬೆಂಗಳೂರು: ಸಹಕಾರ ಇಲಾಖೆಯ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ (KN Rajanna) ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದರು.
ಸಿಎಂ ಅಧಿಕೃತ ನಿವಾಸ ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ (Cooperation Department KDP Meeting) ನಡೆಸಿ ಹಲವು ಮಹತ್ವದ ವಿಷಯಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅಲ್ಲದೇ ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಚರ್ಚಿಸಿದೆ.
ಸಭೆಯ ಮುಖ್ಯಾಂಶಗಳು ಹೀಗಿವೆ:
• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ… pic.twitter.com/DNzxspPoyM
— Siddaramaiah (@siddaramaiah) August 28, 2025
ಸಿಎಂ ಸಭೆಯ ಮುಖ್ಯಾಂಶಗಳೇನು?
* ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37 ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.
• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.
• ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.
• ಕನ್ನಡ ಸಾಹಿತ್ಯ ಪರಿಷತ್‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.
• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.
• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
• ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು…