ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ

Public TV
1 Min Read
shabana azmi

ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (16th Bengaluru Film Festival) ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ (Shabana Azmi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿಯ ಜೊತೆಗೆ 10 ಲಕ್ಷ ರೂ. ಚೆಕ್ ನೀಡಲಾಯಿತು.

shabana azmi 1

ಚಿತ್ರರಂಗದಲ್ಲಿ ಸಾಧನೆ ಮಾಡಿರುವ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಸಿಎಂ ಗೌರವಿಸಿದರು. ಈ ವೇಳೆ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಇದನ್ನೂ ಓದಿ:ಈಗಲೂ ರಶ್ಮಿಕಾ ಕರ್ನಾಟಕದ ಪರ ಇದ್ದೀನಿ ಅಂದ್ರೆ ನಾನು ತುಟಿ ಬಿಚ್ಚಲ್ಲ: ಶಾಸಕ ರವಿ ಗಣಿಗ ಕಿಡಿ

shabana azmi 2

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಮಿಲೇಸುರ್ ಮೇರಾ ತುಮಾರಾ’ ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.

Share This Article