ಬೆಂಗಳೂರು: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಯಲ್ಲಿನ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಉಡಾಫೆಯ ಉತ್ತರ ನೀಡಿದ್ದಾರೆ.
ಮಾಧ್ಯಮಗಳು ವಿಧಾನಸೌಧದಲ್ಲಿ ಪ್ರತಿಕ್ರಿಯೆ ಕೇಳಿದ್ದಕ್ಕೆ, ಕೋಪದಿಂದ “ಏಯ್ ಬಿಡ್ರಿ, ಯಾವ ಮೆಗ್ಗಾನ್ ಇಲ್ಲ” ಎಂದು ಸಿಟ್ಟಿನಿಂದ ಲೋಗೋವನ್ನು ತಳ್ಳಿಕೊಂಡೇ ಕಚೇರಿಯ ಒಳಗಡೆ ಹೋಗಿದ್ದಾರೆ.
ಏನಿದು ಪ್ರಕರಣ?
ಮೆಗ್ಗಾನ್ ಆಸ್ಪತ್ರೆಯ ಕಾರಿಡಾರ್‍ನಲ್ಲಿ ವಯೋವೃದ್ಧರೊಬ್ಬರನ್ನು ಅವರ ಪತ್ನಿ ನೆಲದ ಮೇಲೆ ಮಲಗಿಸಿ ಪ್ರಾಣಿಯಂತೆ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಗುರುವಾರ ಮಧ್ಯಾಹ್ನ ಕಂಡು ಬಂದಿತ್ತು.
ಎರಡನೇ ಮಳಿಗೆಯಿಂದ ಈ ವೃದ್ಧರನ್ನು ಕೆಳಗೆ ಕರೆದುಕೊಂಡು ಹೋಗಲು ಗಾಲಿ ಕುರ್ಚಿ ಕೇಳಿದರೂ ಆಸ್ಪತ್ರೆ ಸಿಬ್ಬಂದಿ ಕೊಟ್ಟಿರಲಿಲ್ಲ. ಇವತ್ತೂ ಎಕ್ಸರೇ ತೆಗೆಸದಿದ್ದರೆ ತೊಂದರೆ ಆದೀತು ಎಂದು ಫಾಮಿದಾ ಗಂಡನನ್ನು ಎಳೆದುಕೊಂಡು ಎಕ್ಸರೇ ತೆಗೆಸಲು ಹೋಗಿದ್ದರು.
ಈ ಬಗ್ಗೆ ಆರೋಗ್ಯ ಸಚಿವ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ರಾಜ್ಯದ ಜನತೆಯ ಕ್ಷಮೆ ಕೇಳಿದ್ದಾರೆ. ನಮಗೆ ಈ ಸ್ಥಾನದಲ್ಲಿ ಕುಳಿತುಕೊಳ್ಳೊದಕ್ಕೂ ನಾಚಿಕ ಆಗುತ್ತದೆ. ನಾನು ಈಗಾಗಲೇ ಶಿವಮೊಗ್ಗ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಆಸ್ಪತ್ರೆಗೆ ಭೇಟಿ ಮಾಡಲು ತಿಳಿಸಿದ್ದೇನೆ. ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ ಕೂಡಲೇ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಅಂದ್ರು.
ಇದನ್ನೂ ಓದಿ: ವ್ಹೀಲ್‍ಚೇರ್ ಕೊಡದ ಆಸ್ಪತ್ರೆ ಸಿಬ್ಬಂದಿ- ಪತಿಯನ್ನು ನೆಲದ ಮೇಲೆಯೇ ಎಳೆದುಕೊಂಡು ಹೋದ ಪತ್ನಿ
https://www.youtube.com/watch?v=Yce9ghRNKJ4